ಜಿಲ್ಲೆ

ಹೆಣ್ಣು ಮಕ್ಕಳ ಸಂಖ್ಯೆ ಇಳಿಮುಖ ಆತಂಕಕಾರಿ

ಗುಂಡ್ಲುಪೇಟೆ: ಹೆಣ್ಣುಮಕ್ಕಳ ರಕ್ಷಣೆ ಹಾಗೂ ಲಿಂಗ ತಾರತಮ್ಯ ತಡೆಯಲು ಸರ್ಕಾರ ಹಲವಾರು ಕಾನೂನುಗಳನ್ನು ಜಾರಿಗೆ ತಂದಿದೆ ಎಂದು ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಕಾಂತಮ್ಮ ಹೇಳಿದರು.

ಪಟ್ಟಣದ ಮದ್ದಾನೇಶ್ವರ ಪ್ರೌಢಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಲಿಂಗತಾರತಮ್ಯ ಹೆಚ್ಚಾಗಿದೆ. 2011ರಲ್ಲಿ ನಡೆಸಿದ ಜನಗತಿಯಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಇಳಿಕೆಯಾಗಿರುವ ಆತಂಕಕಾರಿ ಬೆಳವಣಿಗೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಹೆಣ್ಣು ಮಕ್ಕಳ ರಕ್ಷಣೆ ಮಾಡಲು ಹಲವಾರು ಕಾನೂನು ಜಾರಿಗೊಳಿಸಿದೆ. ಹೆಣ್ಣು ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಲು ವಿಶ್ವ ಮಟ್ಟದಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಮಕ್ಕಳ ಸಮಿತಿಯ ಸರಸ್ವತಿ, ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಮೇಲ್ವಿಚಾರಕಿ ರುದ್ರವ್ವ, ಶಾಲೆಯ ಮುಖ್ಯೋಪಾಧ್ಯಾಯ ಪ್ರಕಾಶ್, ನಿರ್ಮಲ ಸೇವಾ ಕೇಂದ್ರದ ಸಂಯೋಜಕಿ ಸಿಸ್ಟರ್ ಎಡ್ವಿನಾ, ಸುಗಂಧ ಮಹಿಳಾಭಿವೃದ್ಧಿ ಸಂಸ್ಥೆಯ ಸೌಭಾಗ್ಯ ಇತರರು ಇದ್ದರು.