ಜಿಲ್ಲೆ

ಪ್ರಕೃತಿ ವಿಕೋಪ ಎದುರಿಸಲು ಜಿಲ್ಲಾಡಳಿತ ಸನ್ನದ್ಧ


ಮೈಸೂರು:
ಪ್ರಕೃತಿ ವಿಕೋಪಗಳನ್ನು ಎದುರಿಸುವ ನಿಟ್ಟಿನಲ್ಲಿ ಮೈಸೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾಡಳಿತಗಳು ಸಿದ್ಧಗೊಂಡಿವೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ ಗಾಯತ್ರಿ ಮಾಹಿತಿ ನೀಡಿದರು.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಆಯೋಜಿಸಿದ್ದ ‘ವೈನಾಡು ಪ್ರಕೃತಿ ವಿಕೋಪ, ಮಾಧ್ಯಮ ಸವಾಲು-ಸಂವಾದ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಂದಾಯ ಇಲಾಖೆ ವತಿಯಿಂದ ಎಲ್ಲ ಜಿಲ್ಲಾಡಳಿತಗಳು ಕೂಡ ಸಂಭವನೀಯ ಪ್ರಕೃತಿ ವಿಕೋಪಗಳ ಬಗ್ಗೆ ಸ್ಪಂದಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಿಕೊಂಡಿರುತ್ತವೆ. ಅತಿ ವೃಷ್ಟಿಯಿಂದಾಗಿ ಯಾವ ಯಾವ ಭಾಗಗಳಲ್ಲಿ ಹಾನಿಯಾಗಬಹುದಾಗಿದೆ ಎಂಬ ಮಾಹಿತಿಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಪಡೆಯುವ ಮೂಲಕ ಕಾರ್ಯಪ್ರವೃತ್ತರಾಗುತ್ತೇವೆ ಎಂದು ಮಾಹಿತಿ ನೀಡಿದರು.
ಕೇರಳಾದ ವೈನಾಡಿನಲ್ಲಿ ಸಂಭವಿಸಿದ ಭೀಕರ ಪ್ರಕೃತಿ ವಿಕೋಪದ ಸ್ಥಳಕ್ಕೆ ಮೈಸೂರಿನಿಂದ ತೆರಳಿ ನೇರ ವರದಿ ಮಾಡಿದ್ದ ಪತ್ರಕರ್ತರು ತಮ್ಮ ಅನುಭವ ಹಂಚಿಕೊಡರು.
ಎಟಿಐ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಮುಖ್ಯಸ್ಥ ಡಾ.ಅಶೋಕ್ ಎಸ್. ಸಂಗನಾಳ, ಹಿರಿಯ ಪತ್ರಕರ್ತ ಕೆ. ಶಿವಕುಮಾರ್, ಕೆ. ನರಸಿಂಹಮೂರ್ತಿ, ಅನ್ವೇಷಣಾ ಸೇವಾ ಟ್ರಸ್ಟ್ ಸಂಸ್ಥಾಪಕ ಅಮರನಾಥ ರಾಜೇ ಅರಸ್, ಸಂಘದ ಅಧ್ಯಕ್ಷ ಕೆ. ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್ ಇತರರು ಇದ್ದರು.