ವಿಜಯಪುರ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಾ. ತಿಮ್ಮಾಪುರ ಗಲಗಲಿ, ರೇಖಾ ಇಂಗಳೇಶ್ವರ ಮತ್ತಿತರರಿದ್ದರು. 
ಜಿಲ್ಲೆ

ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ

ವಿಜಯಪುರ : ಇಲ್ಲಿನ ಆಥಣಿ ರಸ್ತೆಯಲ್ಲಿರುವ ಜಿಲ್ಲಾಸ್ಪತ್ರೆಗೆ ಬುಧವಾರ ಜಿಲ್ಲಾಧಿಕಾರಿ ಟಿ. ಭೂಬಾಲನ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ತುರ್ತು ಚಿಕಿತ್ಸೆ ವಿಭಾಗಕ್ಕೆ ಭೇಟಿ ನೀಡಿ ಅಲ್ಲಿರುವ ರೋಗಿಗಳ ಆರೈಕೆ ಕುರಿತು ವೈದ್ಯರು ಮತ್ತು ಸಿಬ್ಬಂದಿಯಿಂದ ಮಾಹಿತಿ ಪಡೆದರು. ರೋಗಿಗಳಿಗೆ ಮತ್ತು ಸಂಬಂಧಿಕರಿಗೆ ನೀಡುತ್ತಿರುವ ಸೌಲಭ್ಯದ ಬಗ್ಗೆ ವಿಚಾರಿಸಿದರು. ಆಸ್ಪತ್ರೆಯಲ್ಲಿ ಸ್ವಚ್ಛತೆ, ವಿದ್ಯುತ್ ವ್ಯವಸ್ಥೆ, ನೀರು ಸೇರಿ ಮೂಲ ಸೌಲಭ್ಯಗಳನ್ನು ಸಮರ್ಪಕಾಗಿ ಒದಗಿಸುವಂತೆ ವೈದ್ಯರಿಗೆ ಸೂಚಿಸಿದ ಅವರು, ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲು ತಿಳಿಸಿದರು.

ವೈದ್ಯಾಧಿಕಾರಿ ಡಾ. ತಿಮ್ಮಾಪುರ ಗಲಗಲಿ, ರೇಖಾ ಇಂಗಳೇಶ್ವರ ಮತ್ತಿತರರಿದ್ದರು.