ಜಿಲ್ಲೆ

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Gadag - Desk - Tippanna Avadoot

ಕಲಘಟಗಿ: ತಾಲೂಕಿನ ಹಿಂಡಸಗೇರಿ ಗ್ರಾಮದ ಹತ್ತಿರದ ರಾಜ್ಯ ಹೆದ್ದಾರಿ ಪಕ್ಕದ ಸೇತುವೆ ಬಳಿ ಕಟ್ಟಿಗೆ ತುಂಬಿದ ಲಾರಿಯೊಂದು ಪಲ್ಟಿಯಾಗಿದೆ.


ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಪಕ್ಕದ ತಗ್ಗಿಗೆ ಬಿದ್ದಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಲಾರಿಯಲ್ಲಿದ್ದ ಕಟ್ಟಿಗೆ ಸಂಪೂರ್ಣ ನೆಲಕ್ಕೆ ಉರುಳಿದ್ದು, ಕೆಲವು ಕಡೆ ಲಾರಿ ನಜ್ಜುಗುಜ್ಜಾಗಿದೆ. ಕಲಘಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.