ಜಿಲ್ಲೆ

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಘಟನೆ ತಾಲೂಕಿನ ಆರತಿಬೈಲ್ ಘಟ್ಟ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ. ಲಾರಿ ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಸರಕು ತುಂಬಿಕೊಂಡು ಹೋಗುತ್ತಿತ್ತು. ಆರತಿಬೈಲ್ ಘಟ್ಟದ ತಿರುವಿನಲ್ಲಿ ಎದುರಿನಿಂದ ಬಂದ ವಾಹನವನ್ನು ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಗಟಾರದಲ್ಲಿ ಉರುಳಿ ಬಿದ್ದಿದೆ.

ಘಟನೆಯಲ್ಲಿ ಲಾರಿ ಜಖಂಗೊಂಡಿದೆ. ಚಾಲಕ, ನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.