ಜಿಲ್ಲೆ

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Gadag - Desk - Tippanna Avadoot

ಯಲ್ಲಾಪುರ: ಸರಕು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ತಾಲೂಕಿನ ಮಾಗೋಡ ಕ್ರಾಸ್ ಬಳಿ ಗುರುವಾರ ನಡೆದಿದೆ.
ಜೋರಾಗಿ ಮಳೆ ಸುರಿಯುತ್ತಿರುವ ಕಾರಣ ಲಾರಿ ಚಾಲಕನ ನಿಯಂತ್ರಣ ತಪ್ಪಿದ್ದು, ರಸ್ತೆ ಪಕ್ಕ ಉರುಳಿ ಬಿದ್ದಿದೆ. ಚಾಲಕ, ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಲಾರಿ ಜಖಂಗೊಂಡಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ಪರಿಶೀಲಿಸಿದ್ದಾರೆ.