ಜಿಲ್ಲೆ

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ದೀಪಕ ತಲವಾಯಿ

ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ತಾಲೂಕಿನ ಡೋಮಗೇರಿ ಕ್ರಾಸ್ ಬಳಿ ಭಾನುವಾರ ನಡೆದಿದೆ.

ಸ್ಟೀಲ್ ರೋಲ್ ತುಂಬಿಕೊಂಡು ಕೇರಳದ ಎರ್ನಾಕುಲಂಗೆ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿ ಜಖಂಗೊಂಡಿದ್ದು, ಲಾರಿಯಲ್ಲಿದ್ದ ಸ್ಟೀಲ್ ರೋಲ್​ಗೆ ಹಾನಿಯಾಗಿದೆ. ಲಾರಿ ಚಾಲಕ ಧಾರವಾಡ ಯರಿಕೊಪ್ಪದ ಮಹದೇವಪ್ಪ ಕಲ್ಲಪ್ಪ ಅಂಗಡಿ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.