ಫೋಟೋ ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿ ಎದುರು ರೈತರು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. 
ಜಿಲ್ಲೆ

ಎರಡನೇ ದಿನಕ್ಕೆ ಕಾಲಿಟ್ಟ ರೈತರ ಧರಣಿ

ರವಿಕುಮಾರ್ ಪಿ. ಕೆ

ಗುಂಡ್ಲುಪೇಟೆ: ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ತಾಲೂಕು ಕಚೇರಿ ಎದುರು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಬರಗಾಲ ಹಾಗೂ ಗಾಳಿ ಮಳೆಗೆ ನಾಶವಾದ ಬೆಳೆಗಳಿಗೆ ಪರಿಹಾರ, ಕೆರೆಗಳಿಗೆ ನದಿ ಮೂಲದಿಂದ ನೀರು ತುಂಬಿಸುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ತಾಲೂಕು ಅಧ್ಯಕ್ಷ ದಿಲೀಪ್ ನೇತೃತ್ವದಲ್ಲಿ ಗುರುವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶುಕ್ರವಾರ ಕಾವೇರಿ ನೀರಾವರಿ ನಿಗಮದ ಎಇ ಮಹೇಶ್ ಆಗಮಿಸಿ ಸದ್ಯದಲ್ಲೇ ಕೆರೆಗಳಿಗೆ ನದಿ ಮೂಲದಿಂದ ನೀರು ಹರಿಸುವ ಭರವಸೆ ನೀಡಿದರು. ಆದರೆ, ರೈತಸಂಘವು ಬೆಳೆನಷ್ಟಪರಿಹಾರ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಕಾಲಮಿತಿ ನಿಗದಿಪಡಿಸಿದ್ದರೂ ಯಾವುದೇ ಇಲಾಖೆಯ ಅಧಿಕಾರಿಗಳು ಕ್ರಮಕೈಗೊಳ್ಳದೆ ಕೇವಲ ಭರವಸೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಪಟ್ಟುಹಿಡಿದಿದ್ದಾರೆ.