ಉಡುಪಿ: ನಗರದ ಕರಾವಳಿ ಜಂಕ್ಷನ್ ಬಳಿ ಬೆಂಕಿ ಅವಘಡದಿಂದ ಹೋಟೆಲ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮಂಗಳವಾರ ಸಾಯಂಕಾಲ ಸಂಭವಿಸಿದೆ.
ಕರಾವಳಿ ಜಂಕ್ಷನ್ ಬಳಿ ಇರುವ ಬಿರಿಯಾನಿ ಹಟ್ ಎಂಬ ಹೋಟೆಲ್ ನಲ್ಲಿ ಸಾಯಂಕಾಲ ವೇಳೆಗೆ ಆಕಸ್ಮಿಕವಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಹೋಟೆಲ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು. ಕಳೆದ ಕೆಲ ದಿನಗಳಿಂದ ಹೋಟೆಲ್ ಮಾಲಿಕರು ವ್ಯಾಪಾರ ಸ್ಥಗಿತಗೊಳಿಸಿದ್ದು, ಶಾರ್ಟ್ ಸಕ್ಯೂರ್ಟ್ ನಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.