ಜಿಲ್ಲೆ

ಪ್ರತಿಭೆ ಹೊರಹೊಮ್ಮಲು ಕಾರಂಜಿ ಸಹಕಾರಿ

ಕುಶಾಲನಗರ: ಕುಶಾಲನಗರ ಶೈಕ್ಷಣಿಕ ಕ್ಲಸ್ಟರ್ ಕೇಂದ್ರದ ವತಿಯಿಂದ ಕುಶಾಲನಗರ ಪಟ್ಟಣದ ಜ್ಞಾನ ಭಾರತಿ ವಿದ್ಯಾಸಂಸ್ಥೆಯಲ್ಲಿ ಸೋಮವಾರ ಏರ್ಪಡಿಸಿದ್ದ ಪ್ರೌಢಶಾಲಾ ವಿದ್ಯಾರ್ಥಿಗಳ ಕುಶಾಲನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲಿಕೋತ್ಸವದಲ್ಲಿ ಮಕ್ಕಳ ಬಹುಮುಖ ಪ್ರತಿಭೆ ಅನಾವರಣಗೊಂಡಿತು.

ವಿವಿಧ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಜ್ಞಾನಭಾರತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಜಿ.ಎಲ್.ನಾಗರಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಭಾ ಕಾರಂಜಿ ಸ್ಪರ್ಧೆಯು ಮಕ್ಕಳಲ್ಲಿ ಶಿಕ್ಷಣ, ಮನರಂಜನೆ ಹಾಗೂ ಗುಪ್ತ ಪ್ರತಿಭೆ ಹೊರಹೊಮ್ಮಲು ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಬಿ.ಎನ್.ಪುಷ್ಪಾ, ನಿವೃತ್ತ ಶಿಕ್ಷಕ ಉ.ರಾ.ನಾಗೇಶ್, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಟಿ.ಈ.ವಿಶ್ವನಾಥ್ ಮಾತನಾಡಿದರು.

ಪ್ರೌಢಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಡಿ.ಎಲ್. ಚಂದ್ರಕಲಾ, ಶಿಕ್ಷಕರ ಸಂಘಟನೆಯ ಪ್ರಮುಖರಾದ ಎಸ್.ಕೆ.ಸೌಭಾಗ್ಯಾ, ಎಚ್.ಎಸ್.ಉಮಾದೇವಿ, ಮೂಕಾಂಬಿಕಾ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಸ್.ಎಸ್.ಗೋಪಾಲ್, ಗೊಂದಿ ಬಸವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಸ್.ಕೆ.ಜಲಜಾಕ್ಷಿ, ಆಶಾ, ಸೀಮಾ, ಆದರ್ಶ್, ವೈಶಾಲಿ, ಎಸ್.ವಿ.ಸಂತೋಷ್ ಕುಮಾರ್, ಎಸ್.ಆರ್.ಶಿವಲಿಂಗ, ಜಂಶೀರ್ ಖಾನ್ ಅಹ್ಮದ್ ಇತರರು ಇದ್ದರು.