The freedom struggle is unforgettable 
ಜಿಲ್ಲೆ

ಸ್ವಾತಂತ್ರ್ಯ ಹೋರಾಟ ಅವಿಸ್ಮರಣೀಯ

Vijayapura - Desk - Doddanagouda Gudihindin

ಇಳಕಲ್ಲ (ಗ್ರಾ) : ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ರಾಷ್ಟ್ರ ನಾಯಕರ ತ್ಯಾಗ, ಬಲಿದಾನ ಅವಿಸ್ಮರಣೀಯ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ತಹಸೀಲ್ದಾರ್ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಡೀ ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ಡಾ.ಬಾಬಾಸಾಹೇಬ ಅಂಬೇಡ್ಕರ್ ನೀಡಿದ್ದಾರೆ. ಸಂವಿಧಾನದಿಂದಾಗಿ ಎಲ್ಲರಿಗೂ ಅವಕಾಶಗಳು ಸಿಗುತ್ತವೆ ಎಂದರು.

ತಹಸೀಲ್ದಾರ್ ಸತೀಶ ಕೂಡಲಗಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ತಾಪಂ ಇಒ ಬಸವಂತಪ್ಪ ಅಂಟರದಾನಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘು ಚಿಂಚಮಿ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ, ಉಪಾಧ್ಯಕ್ಷೆ ಕಾಳಮ್ಮ ಜಕ್ಕಾ, ಪೌರಾಯುಕ್ತ ಶ್ರೀನಿವಾಸ ಜಾಧವ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪರಶುರಾಮ ಪಮ್ಮಾರ ಮತ್ತಿತರಿದ್ದರು.