ಕೊಳ್ಳೇಗಾಲ ಪಟ್ಟಣದ ಹೊಸ ಹಂಪಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಶಾಲೆಯ ಹಳೇಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಮಹೇಶ್ ಹಾಗೂ ಪದಾಧಿಕಾರಿಗಳು ನೋಟ್ ಬುಕ್ ಹಾಗೂ ಲೇಖನ ಸಾಮಾಗ್ರಿ ಗಳನ್ನು ವಿತರಿಸಿದರು. ಹೀನಾ ಕೌಸರ್, ಭಾಸ್ಕರ್,ಬಿ.ಸಾವಿತ್ರಮ್ಮ, ಬಿ.ಉಷಾ, ಕೆ.ಎಸ್. ಪಂಕಜಮ್ಮ, ಡಿ.ಶೀಲಾ ಇತರರು ಇದ್ದರು. 
ಜಿಲ್ಲೆ

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಲಿ

ಕೊಳ್ಳೇಗಾಲ : ಪಟ್ಟಣದ ಹೊಸ ಹಂಪಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಶಾಲೆಯ ಹಳೇಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಮಹೇಶ್ ಹಾಗೂ ಪದಾಧಿಕಾರಿಗಳು ದಾನಿಗಳಾದ ಮಂಜುನಾಥ್ ಸಹಯೋಗದಲ್ಲಿ ನೋಟ್ ಬುಕ್ ಹಾಗೂ ಲೇಖನ ಸಾಮಾಗ್ರಿ ವಿತರಿಸಿದರು.

ಶಾಲೆಯ ಹಳೇಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಗೂ ಗ್ರಾ.ಪಂ.ಮಾಜಿ ಸದಸ್ಯ ಎಸ್.ಮಹೇಶ್ ಮಾತನಾಡಿ, ಸರ್ಕಾರಿ ಶಾಲೆಗಳು ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಬೇಕು. ಹೊಸ ಹಂಪಾಪುರ ಗ್ರಾಮದಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಬೇಕು. ಹೆಚ್ಚುವರಿ ಶಿಕ್ಷಕರನ್ನು ನಿಯೋಜನೆ ಮಾಡಬೇಕು ಎಂದು ಶಿಕ್ಷಣ ಇಲಾಖೆಗೆ ಮನವಿ ಮಾಡಿದರು.

ಏಳೆಂಟು ವರ್ಷದಿಂದ ಮಕ್ಕಳಿಗೆ ನೋಟ್ ಬುಕ್ ಹಾಗೂ ಲೇಖನ ಪರಿಕರಗಳನ್ನು ನೀಡುತ್ತ ಬರಲಾಗಿದೆ. ನಮಗೆ ನಮ್ಮ ಶಾಲೆ ಉಳಿಯಬೇಕು. ಉತ್ತಮ ಶೈಕ್ಷಣಿಕ ವಾತಾವರಣ ಮಕ್ಕಳಿಗೆ ಸಿಗಬೇಕೆಂಬುದು ನಮ್ಮ ಉದ್ದೇಶವಾಗಿದೆ. ಮಕ್ಕಳು ನೋಟ್ ಪುಸ್ತಕಗಳನ್ನು ಸದ್ಬಳಕೆ ಮಾಡಿಕೊಂಡು ಓದಿದ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತರಬೇಕು ಎಂದು ಕಿವಿಮಾತು ಹೇಳಿದರು.

ಶಿಕ್ಷಣ ಸಂಯೋಜಕಿ ಇಸಿಒ ಹೀನಾಕೌಸರ್ ಮಾತನಾಡಿ, ಇಂದಿನ ಮಕ್ಕಳು ದೇಶದ ಭವಿಷ್ಯದ ಆಸ್ತಿಯಾಗಿದ್ದಾರೆ. ಹಾಗಾಗಿ ಪ್ರತಿಯೊಂದು ಮಕ್ಕಳು ಶಿಕ್ಷಣ ಪಡೆಯಬೇಕೆಂಬ ಉದ್ದೇಶದಡಿ ಸರ್ಕಾರ ನಾನಾ ಸೌಲಭ್ಯಗಳನ್ನು ನೀಡುತ್ತಿದೆ. ಅಂತೆಯೇ ಹಲವೆಡೆ ದಾನಿಗಳು ನೆರವಾಗುವುದು ಪ್ರಶಂಸನೀಯ ಸಂಗತಿಯಾಗಿದೆ. ಕೊಳ್ಳೇಗಾಲದ ಹೊಸ ಹಂಪಾಪರ ಗ್ರಾಮದಲ್ಲಿ ಹಳೇ ವಿದ್ಯಾರ್ಥಿಗಳ ಸಂಘವೂ ಪ್ರತಿ ವರ್ಷ ಮಕ್ಕಳ ಶಿಕ್ಷಣಕ್ಕೆ ಅಗತ್ಯವಿರುವ ನೋಟ್ ಬುಕ್ ಇನ್ನಿತರ ಲೇಖನಿ ಸಾಮಗ್ರಿಗಳನ್ನು ದಾನಿಗಳ ಸಹಕಾರ ಪಡೆದು ನೆರವಾಗುತ್ತಿದೆ. ಇದ್ದರಿಂದ ಮಕ್ಕಳ ಓದಿಗೆ ಸಹಕಾರಿಯಾಗಿದೆ. ಪಾಲಕರು ಮನೆಯಲ್ಲಿ ಬಡತನವಿದ್ದರೂ ಅದನೆಲ್ಲ ಮೀರಿ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿದರೆ ಮುಂದಿನ ದಿನಗಳಲ್ಲಿ ನಿಮ್ಮ ಮಕ್ಕಳೆ ಸಮಾಜದ ಆಸ್ತಿಯಾಗುತ್ತಾರೆ ಎಂದು ಕಿವಿ ಮಾತು ಹೇಳಿದರು.

ಈ ವೇಳೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಪರಿಮಳಾ, ಉಪಾಧ್ಯಕ್ಷ ಮೂರ್ತಿ, ಸದಸ್ಯರಾದ ಶಶಿ, ಗೀತಾ, ದೀಪಾ, ಕ್ಲಸ್ಟರ್ ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಸಿಆರ್‌ಪಿ ಭಾಸ್ಕರ್, ಹಳೇಯ ವಿದ್ಯಾರ್ಥಿ ಸಂಘದ ಪದಾಧಿಕಾರಿ ಲೋಕೇಶ್, ಉಮೇಶ್, ಕಿರಣ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಬಿ.ಸಾವಿತ್ರಮ್ಮ, ಶಿಕ್ಷಕರಾದ ಬಿ.ಉಷಾ, ಕೆ.ಎಸ್. ಪಂಕಜಮ್ಮ, ಡಿ.ಶೀಲಾ, ಅಥಿತಿ ಶಿಕ್ಷಕಿ ಮಂಜುಳಾ ಮತ್ತಿತರಿದ್ದರು.