ಜಿಲ್ಲೆ

ಸರ್ಕಾರ ಜನರ ಮೇಲೆ ದ್ವೇಷ ಸಾಧಿಸುತ್ತಿದೆ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಅನ್ನು ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತೈಲ ಬೆಲೆ ಏರಿಕೆ ಮಾಡಿ ಜನರ ಮೇಲೆ ದ್ವೇಷ ಸಾಧಿಸಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಪೂರ್ವ ಗ್ಯಾರಂಟಿ...ಗ್ಯಾರಂಟಿ ಎಂದು ಕಾಂಗ್ರೆಸ್ಸಿಗರು ಬೊಬ್ಬೆ ಹೊಡೆಯುತ್ತಿದ್ದರು. ಫಲಿತಾಂಶ ನೋಡಿದ ಮೇಲೆ ರಾಜ್ಯದ ಜನತೆ ಕಾಂಗ್ರೆಸ್​ಅನ್ನು ತಿರಸ್ಕರಿಸಿರುವುದು ಸ್ಪಷ್ಟವಾಗುತ್ತದೆ. ರಾಜ್ಯ ಸರ್ಕಾರ ತೈಲ ಬೆಲೆ ಏರಿಕೆಯನ್ನು ವಾಪಸ್ ಪಡೆಯುವವರೆಗೂ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದರು.

ತೈಲ ಬೆಲೆ ಏರಿಕೆಯಿಂದ ಬಸ್ ಪ್ರಯಾಣ ದರ, ಹಾಲು, ತರಕಾರಿ, ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಲಿವೆ. ಇದು ಕಾಂಗ್ರೆಸ್ಸಿನ ಬಡವರ ವಿರೋಧಿ ನೀತಿಯಾಗಿದೆ. ಯಾವುದೇ ಮುಂದಾಲೋಚನೆ ಇಲ್ಲದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಪರಿಣಾಮ ರಾಜ್ಯ ಸರ್ಕಾರ ದಿವಾಳಿಯಾಗಿದೆ. ಹೀಗಾಗಿ ಇಂದು ಜನರ ಮೇಲೆ ಹೊರೆ ಹಾಕಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರದ ಆಳ್ವಿಕೆಯಲ್ಲಿ ಬೆಲೆ ಏರಿಕೆ ಉಚಿತ, ಅಪರಾಧ-ಹಿಂದು ವಿರೋಧಿ ನೀತಿ ಖಚಿತ ಎಂಬಂತಾಗಿದೆ ಎಂದು ಟೀಕಿಸಿದರು.