ಜಿಲ್ಲೆ

ಕುಲಸಚಿವ ಪ್ರೊ. ಆರ್. ಶಿವಪ್ಪ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಮೈಸೂರು: ಮೈಸೂರು ವಿಶ್ವ ವಿದ್ಯಾಲಯದ ಕುಲಸಚಿವ ಹುದ್ದೆಗೆ ಕೆಎಎಸ್ ಅಧಿಕಾರಿ ವಿ.ಆರ್. ಶೈಲಜಾ ನೇಮಕ ಪ್ರಶ್ನಿಸಿ ವರ್ಗಾಯಿತ ಕುಲಸಚಿವ ಪ್ರೊ. ಆರ್. ಶಿವಪ್ಪ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ನಲ್ಲಿ ಬುಧವಾರ ವಜಾಗೊಳಿಸಿದೆ.

ಶೈಲಜಾ ಅವರು ಕುಲಸಚಿವರಾಗಿ ಸೋಮವಾರ ಅಧಿಕಾರ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಅದೇ ದಿನ ಪ್ರೊ.ಆರ್. ಶಿವಪ್ಪ ಹೈಕೋರ್ಟ್‌ನಲ್ಲಿ ಶೈಲಜಾ ನೇಮಕಾತಿ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿ ಸರ್ಕಾರ ವರ್ಗಾವಣೆ ಆದೇಶವನ್ನು ಎತ್ತಿ ಹಿಡಿದಿದೆ.

ಪ್ರೊ.ಆರ್. ಶಿವಪ್ಪ 2019ರ ಸೆಪ್ಟೆಂಬರ್‌ನಲ್ಲಿ ಕುಲಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದರು. ನಂತರ ಅವರನ್ನು ನವೆಂಬರ್‌ನಲ್ಲಿ ಮಾತೃ ವಿಭಾಗ (ಗಂಗೋತ್ರಿಯ ಸಮಾಜ ಕಾರ್ಯ) ವರ್ಗಾಯಿಸಲಾಗಿತ್ತು. ಆ ಸಂದರ್ಭ ಹೈಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದರು. ಅದಾದ ನಂತರ 2021 ಡಿ.3 ರಂದು ಮತ್ತೊಮ್ಮೆ ಮಾತೃ ವಿಭಾಗಕ್ಕೆ ವರ್ಗಾವಣೆ ಮಾಡಿದ ಸಂದರ್ಭದಲ್ಲೂ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.