ಕುಶಾಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಮುಷ್ಕರದಿಂದ ಬಿಕೋ ಎನ್ನುತ್ತಿರುವುದು. 
ಜಿಲ್ಲೆ

ಮುಷ್ಕರದಿಂದ ಬಿಕೋ ಎನ್ನುತ್ತಿದ್ದ ಆಸ್ಪತ್ರೆ

ಕುಶಾಲನಗರ: ಕೋಲ್ಕತಾದಲ್ಲಿ ಇತ್ತೀಚೆಗೆ ತರಬೇತಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಖಂಡಿಸಿ ಇಲ್ಲಿನ ಸರ್ಕಾರಿ ಆಸ್ಪತ್ರೆ ವೈದ್ಯರು ತುರ್ತು ಸೇವೆ ಹೊರತುಪಡಿಸಿ ಉಳಿದ ಸೇವೆಗಳನ್ನು ಬಂದ್‌ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸದಾ ಜನರಿಂದ ತುಂಬಿ ತುಳುಕುತ್ತಿದ್ದ ಆಸ್ಪತ್ರೆ ಶನಿವಾರ ಬಿಕೋ ಎನ್ನುತ್ತಿತ್ತು. ಒಳರೋಗಿಗಳಿಗೆ ಮತ್ತು ತುರ್ತು ಸೇವಾ ವಿಭಾಗದಲ್ಲಿ ಕಾಣಿಸಿಕೊಂಡ ವೈದ್ಯರು, ಘಟನೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇಂತಹ ಹೀನ ಕೃತ್ಯ ಮರುಕಳಿಸದಂತೆ ಸರ್ಕಾರ ಜಾಗ್ರತೆ ವಹಿಸಬೇಕು. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ವಿಶೇಷವಾಗಿ ಮಹಿಳಾ ವೈದ್ಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಡಾ.ಪ್ರತಿಭಾ ಸರ್ಕಾರವನ್ನು ಒತ್ತಾಯಿಸಿದರು.