ಜಿಲ್ಲೆ

ಗಾಯಗೊಂಡಿದ್ದ ಬಾಲಕ ಸಾವು

ಮಾದೇಶ್ ತಿ.ನರಸೀಪುರ

ಎಚ್.ಡಿ.ಕೋಟೆ: ಮೈಸೂರಿನಲ್ಲಿ ಬಸವ ಜಯಂತಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕ ಭಾನುವಾರ ಮೃತಪಟ್ಟಿದ್ದಾನೆ.

ತಾಲೂಕಿನ ಕಾರೆಹುಂಡಿ ಗ್ರಾಮದ ನಾಗೇಶ್ ಅವರ ಪುತ್ರ ತೇಜಸ್(13) ಮೃತ ಬಾಲಕ. ತಾಲೂಕಿನ ಕಟ್ಟೆಮನುಗನಹಳ್ಳಿ ಗ್ರಾಮದಿಂದ ಸಂಬಂಧಿಕರ ಮನೆಗೆ ಬಂದು ಅಲ್ಲಿಂದ ಮೇ 24ರಂದು ಮೈಸೂರಿನಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಮೈಸೂರು-ಮಾನಂದವಾಡಿ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ 10 ಹೆಚ್ಚು ಜನರು ಗಾಯಗೊಂಡಿದ್ದರು.

ತಲೆ ಭಾಗಕ್ಕೆ ತೀವ್ರವಾಗಿ ಗಾಯವಾಗಿದ್ದ ತೇಜಸ್, ಮೈಸೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಭಾನುವಾರ ಮೃತಪಟ್ಟಿದ್ದಾನೆ.

ಡಿ.ಕೋಟೆ: ತಾಲೂಕಿನ ದೇವಲಾಪುರ ಗ್ರಾಮದ ಮಣಿ(40) ಅನಾರೋಗ್ಯದಿಂದ ಭಾನುವಾರ ನಿಧನರಾದರು.

ಇವರಿಗೆ ಪತ್ನಿ, ಮೂವರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ದೇವಲಾಪುರದಲ್ಲಿ ನಡೆಯಿತು.