ಸಿರಗುಪ್ಪ: ಪಟ್ಟಣದ ಸಿಡಿಪಿಒ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ದೇವರಾಜ ಅರಸು ಜಯಂತಿ ಆಚರಣೆ ಪೂರ್ವಭಾವಿ ಸಭೆ ಸೋಮವಾರ ನಡೆಯಿತು.
ಇದನ್ನೂ ಓದಿ: 26ರಂದು ಡಿ.ದೇವರಾಜ ಅರಸು ಜಯಂತಿ ಆಚರಣೆ
ಉಪತಹಸೀಲ್ದಾರ್ ಸಿದ್ಧಾರ್ಥ ಕಾರಂಜಿ ಮಾತನಾಡಿ, ಮಾಜಿ ಸಿಎಂ ಡಿ.ದೇವರಾಜ ಅರಸು ಜಯಂತಿಯನ್ನು ಆ.20ರಂದು ಆಚರಿಸಲಾಗುವುದು. ಎಲ್ಲ ಸರ್ಕಾರಿ, ಅರೆ ಸರ್ಕಾರಿ ಕಚೇರಿ, ಶಾಲೆ, ಕಾಲೇಜುಗಳಲ್ಲಿ ಕಡ್ಡಾಯವಾಗಿ ಆಚರಿಸಬೇಕು ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಮಲ್ಲಿಕಾರ್ಜುನ ಮಾತನಾಡಿ, ಜಿಲ್ಲೆಯ ಹಿಂದುಳಿದ ವಸತಿ ನಿಲಯಗಳಲ್ಲಿದ್ದು ಅತಿ ಹೆಚ್ಚು ಅಂಕಗಳಿಸಿದ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳು ಮತ್ತು ವಸತಿ ನಿಲಯದಲ್ಲಿದ್ದು ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಶಾಲೆ, ಕಾಲೇಜುಗಳಲ್ಲಿ ಭಾಷಣ, ರಸಪ್ರಶ್ನೆ, ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗುವುದು ಎಂದರು.
ಇದನ್ನೂ ಓದಿ:
ತಾಪಂ ಇಒ ಪವನಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಡ್ಡೇರು ಸಿದ್ದಯ್ಯ, ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ರಮೇಶ, ತೆಕ್ಕಲಕೋಟೆ ಪಪಂ ಮುಖ್ಯಾಧಿಕಾರಿ ಪರಶುರಾಮ, ವಕೀಲರ ಸಂಘದ ಅಧ್ಯಕ್ಷ ಉಪ್ಪಾರ ವೆಂಕೋಬ, ಕಾರ್ಮಿಕ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ತಿರುಮಲೇಶ, ಪ್ರಮುಖರಾದ ಕರಿಬಸಪ್ಪ, ಸೋಮಪ್ಪ, ಕೊಡ್ಲೆ ಮಲ್ಲಿಕಾರ್ಜುನ, ಗಾಳೆಪ್ಪ, ಸಣ್ಣ ರಾಮಪ್ಪ, ಕೆ.ಕೃಷ್ಣ ಇದ್ದರು.