ಜಿಲ್ಲೆ

ಉಪನ್ಯಾಸ ನಾಳೆ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂಘವು ಸೆ. 21ರಂದು ಸಂಜೆ 6 ಗಂಟೆಗೆ ಡಾ. ಪಾಟೀಲ ಪುಟ್ಟಪ್ಪ ಭವನದಲ್ಲಿ ಪ್ರೊ. ಸದಾನಂದ ಕನವಳ್ಳಿ ಸ್ಮರಣಾರ್ಥ ದತ್ತಿ ನಿಮಿತ್ತ ಪ್ರೊ. ಸದಾನಂದ ಕನವಳ್ಳಿಯವರ ಬಹುಮುಖ ವ್ಯಕ್ತಿತ್ವ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಿದೆ.
ಬೆಳಗಾವಿ ಕೆಎಲ್​ಇ ಸಂಸ್ಥೆಯ ಲಿಂಗರಾಜ ಕಾಲೇಜಿನ ಪ್ರಾಚಾರ್ಯ ಡಾ. ಹನುಮಂತ ಮೇಲಿನಮನಿ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು. ಡಾ. ವೀರಣ್ಣ ರಾಜೂರ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.