ಜಿಲ್ಲೆ

ಮಹಾಂತ ಶಿವಯೋಗಿಗಳ ಬದುಕು ನಮಗೆ ಪ್ರೇರಣೆ

ಪಡುಬಿದ್ರಿ: ದುರ್ವ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸವಾಜ ನಿರ್ವಾಣಕ್ಕೆ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು. ಅವರ ಬದುಕೇ ನಮಗೆ ಪ್ರೇರಣೆ ಎಂದು ತಹಸೀಲ್ದಾರ್ ಪ್ರತಿಭಾ ಆರ್. ಹೇಳಿದರು.

ಕಾಪು ತಾಲೂಕು ಆಡಳಿತ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಹಯೋಗದಲ್ಲಿ ಶುಕ್ರವಾರ ನಡೆದ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನ ‘ವ್ಯಸನ ಮುಕ್ತ ದಿನಾಚರಣೆ ಉದ್ಘಾಟಿಸಿ ವಾತನಾಡಿದರು.

ಕಾಲೇಜು ಪ್ರಾಂಶುಪಾಲ ಗೋಪಾಕೃಷ್ಣ ಗಾಂವ್ಕರ್ ವಾತನಾಡಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗದೆ ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದರು.

ಆರೋಗ್ಯ ಇಲಾಖೆಯ ಮಂಜುಳಾ ಶೆಟ್ಟಿ ದುರ್ವ್ಯಸನಗಳ ಕುರಿತು ಉಪನ್ಯಾಸ ನೀಡಿ ಪ್ರತಿಜ್ಞಾವಿಧಿ ಬೋಧಿಸಿದರು.

ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ, ಸದಸ್ಯರಾದ ಫರ್ಜಾನಾ, ರಾಧಿಕಾ, ಸತೀಶ್ಚಂದ್ರ, ಅಮೀರ್, ನೂರುದ್ದೀನ್, ಶೋಭಾ ಬಂಗೇರ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನಚಂದ್ರ ಸುವರ್ಣ, ಉಪ ತಹಸೀಲ್ದಾರ್‌ಗಳಾದ ದೇವಕಿ, ರವಿಕಿರಣ್, ಕಂದಾಯ ನಿರೀಕ್ಷಕ ಇಜ್ಜಾರ್ ಸಾಬಿರ್, ವಾನಸ, ಗ್ರಾವಾಡಳಿತಾಧಿಕಾರಿಗಳು ಉಪಸ್ಥಿತರಿದ್ದರು. ರಿಷಿಕಾ ಕಾರ್ಯಕ್ರಮ ನಿರೂಪಿಸಿದರು.