ಜಿಲ್ಲೆ

ವಿ.ಶ್ರಿನಿವಾಸಪ್ರಸಾದ್ ವಿಧಿವಶರಾದ ಸುದ್ದಿ ದಿಗ್ಭ್ರಮೆ ಮೂಡಿಸಿದೆ

ಹಿರಿಯ ನಾಯಕರು, ಸಂಸದರು, ಆತ್ಮೀಯರಾದ ವಿ.ಶ್ರಿನಿವಾಸಪ್ರಸಾದ್ ವಿಧಿವಶರಾದ ಸುದ್ದಿ ದಿಗ್ಭ್ರಮೆ ಮೂಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯರಪ್ಪ ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಅವರನ್ನು ಭೇಟಿಯಾಗಿದ್ದು, ಈಗ ಅವರು ನಮ್ಮೊಂದಿಗೆ ಇಲ್ಲ ಎನ್ನುವುದನ್ನು ನಂಬಲಾಗುತ್ತಿಲ್ಲ. ರಾಜ್ಯ ಹಾಗೂ ದೇಶದ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು ಪ್ರಭಾವಿ ದಲಿತ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ನಾಡು ಒಬ್ಬ ಹಿರಿಯ ನೇತಾರರನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಅವರ ಕುಟುಂಬ, ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.