ಜಿಲ್ಲೆ

ಕಲಿಕಾ ಆಸಕ್ತಿ ಹೆಚ್ಚಳ ಉದ್ದೇಶ

Avinash R

ಕಡಬ: ಮಕ್ಕಳನ್ನು ಹಲವು ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಮಾಡಿ ಅವರ ಕಲಿಕಾ ಆಸಕ್ತಿ ಹೆಚ್ಚಿಸುವುದು ಕಲಿಕಾ ಹಬ್ಬದ ಮುಖ್ಯ ಉದ್ದೇಶವಾಗಿದೆ ಎಂದು ಕಾಣಿಯೂರು ಗ್ರಾಪಂ ಸದಸ್ಯ ಪ್ರವೀಣ್ ಚಂದ್ರ ರೈ ಕುಮೇರು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ, ಕಾಣಿಯೂರು ಸಮೂಹ ಸಂಪನ್ಮೂಲ ಕೇಂದ್ರ, ಬೊಬ್ಬೆಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಬೊಬ್ಬೆಕೇರಿ ಶಾಲೆಯಲ್ಲಿ ನಡೆದ ಶೈಕ್ಷಣಿಕ ಬಲವರ್ಧನೆ ವರ್ಷ 2024-25 ಕಾಣಿಯೂರು ಕ್ಲಸ್ಟರ್ ಮಟ್ಟದ ಮಕ್ಕಳ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದರು.

ಬೊಬ್ಬೆಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್‌ಡಿಎಂಸಿ ಅಧ್ಯಕ್ಷೆ ಸುನೀತಾ ಗಣೇಶ್ ಅಧ್ಯಕ್ಷತೆ ವಹಿಸಿದ್ದರು. ಕಾಣಿಯೂರು ಗ್ರಾಪಂ ಸದಸ್ಯ ಸುನಂದಾ ಅಬ್ಬಡ, ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಕೆ., ಬೊಬ್ಬೆಕೇರಿ ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಸವಣೂರು ಕ್ಲಸ್ಟರ್ ಸಿಆರ್‌ಪಿ ಜಯಂತ್ ವೈ. ಮೊದಲಾದವರು ಇದ್ದರು. ಕಾಣಿಯೂರು ಕ್ಲಸ್ಟರ್ ಸಿಆರ್‌ಪಿ ಯಶೋದ ಪ್ರಸ್ತಾವಿಸಿದರು. ಮುಖ್ಯಶಿಕ್ಷಕಿ ಶಶಿಕಲಾ ಸ್ವಾಗತಿಸಿದರು. ಶಿಕ್ಷಕಿ ಗೀತಾ ಕುಮಾರಿ ವಂದಿಸಿದರು. ಶಿಕ್ಷಕ ಜನಾರ್ದನ ಹೇಮಳ ಕಾರ್ಯಕ್ರಮ ನಿರೂಪಿಸಿದರು.

*ಸಮಾರೋಪ ಸಮಾರಂಭ: ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷೆ ಸುನೀತಾ ಗಣೇಶ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ರಮೇಶ್ ಉಪ್ಪಡ್ಕ, ಮುಖ್ಯಶಿಕ್ಷಕಿ ಶಶಿಕಲಾ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಎಸ್‌ಡಿಎಂಸಿ ಸದಸ್ಯರಾದ ಸೋಮನಾಥ ದರ್ಖಾಸು, ಸುಧಾಕರ್ ಕಾಣಿಯೂರು, ಸದಾನಂದ ಕಡಿರ, ಶೋಭಾ, ಭವ್ಯ, ದೀಪಿಕಾ, ರಕ್ಷಿತಾ ಉಪಸ್ಥಿತರಿದ್ದರು. ಕಾಣಿಯೂರು ಕ್ಲಸ್ಟರ್ ಸಿಆರ್‌ಪಿ ಯಶೋದ ಬಹುಮಾನ ವಿಜೇತರ ವಿವರ ವಾಚಿಸಿದರು. ಶಿಕ್ಷಕ ಜನಾರ್ದನ ಹೇಮಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸವಣೂರು ಕ್ಲಸ್ಟರ್ ಸಿಆರ್‌ಪಿ ಜಯಂತ ವೈ.ವಂದಿಸಿದರು.