ರಟ್ಟಿಹಳ್ಳಿ: ತಾಲೂಕಿನ ಐತಿಹಾಸಿಕ ಮದಗದ ಕೆಂಚಮ್ಮನ ಕೆರೆಗೆ ವೀರಶೈವ ಲಿಂಗಾಯತ ಪಂಚಮಸಾಲಿ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕ ರಟ್ಟಿಹಳ್ಳಿ, ಹಿರೇಕೆರೂರು, ಶಿಕಾರಿಪುರ ಹಾಗೂ ಪಂಚ ಪರಮಪೂಜ್ಯರ ಸಾನ್ನಿಧ್ಯದಲ್ಲಿ ಸೆ. 12ರಂದು ಬೆಳಗ್ಗೆ 11 ಗಂಟೆಗೆ ಬಾಗಿನ ಅರ್ಪಣೆ ಕಾರ್ಯಕ್ರಮ ಜರುಗಲಿದೆ. ಕೂಡಲಸಂಗಮ ಶ್ರಿ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಕಬ್ಬಿಣಕಂತಿಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ತಿಪ್ಪಾಯಿಕೊಪ್ಪ ಶ್ರೀ ಮೂಕಪ್ಪ ಶಿವಯೋಗಿ ಮಠದ ಶ್ರೀ ವಿರುಪಾಕ್ಷ ಸ್ವಾಮೀಜಿ, ಶ್ರೀ ಮಹಾಂತ ಸ್ವಾಮೀಜಿ ಮತ್ತು ಕಡೇನಂದೀಹಳ್ಳಿ ರೇವಣಸಿದ್ಧೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ಸಂಘದ ತಾಲೂಕಾಧ್ಯಕ್ಷ ಪರಮೇಶ್ವರಪ್ಪ ಹಲಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.