ವಿಜಯವಾಣಿ ಸುದ್ದಿಜಾಲ ಕುಂದಾಪುರ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ ಹಾಗೂ ಸ್ಥಳೀಯ ಪ್ರದೇಶದಲ್ಲಿ ಸಮಾಜ ಸೇವೆ ದೃಷ್ಟಿಯಿಂದ ಸಮಾನ ಮನಸ್ಕರು ಜತೆಗೂಡಿ ಕೋಟೇಶ್ವರ ಟ್ರಸ್ಟ್ ರಚಿಸಿದ್ದು, ಭಕ್ತರ ಅನುಕೂಲಕ್ಕಾಗಿ ಶೌಚಗೃಹ ನಿರ್ಮಾಣ ಸಹಿತ ಮೂಲಸೌಕರ್ಯ ಅಭಿವೃದ್ಧಿಗೊಳಿಸಿದ ಕಾರ್ಯ ಶ್ಲಾಘನೀಯ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಕೋಟೇಶ್ವರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಸಹಕಾರದೊಂದಿಗೆ ಕೋಟೇಶ್ವರದ ರಥಬೀದಿಯಲ್ಲಿ ನಿರ್ಮಾಣಗೊಂಡ ಟ್ರಸ್ಟ್‌ನ ಕಚೇರಿ ಹಾಗೂ ಶೌಚಗೃಹ ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು. ಕೋಟೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಗೋಪಾಡಿ ಶ್ರೀನಿವಾಸ ರಾವ್, ನೇರಂಬಳ್ಳಿ ರಾಘವೇಂದ್ರ ರಾವ್, ಮಾಜಿ ಸಚಿವರಾದ ಅಭಯಚಂದ್ರ ಜೈನ್, ವಿನಯಕುಮಾರ್ ಸೊರಕೆ, ಸಮಾಜ ಸೇವಕ ದಿನೇಶ್ ಹೆಗ್ಡೆ ಮೊಳಹಳ್ಳಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ಕೋಟೇಶ್ವರ ಗ್ರಾಪಂ ಅಧ್ಯಕ್ಷೆ ರಾಗಿಣಿ ದೇವಾಡಿಗ, ಬೀಜಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಪ್ರಕಾಶ್ ಜಿ ಪೂಜಾರಿ, ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ.ಗೋಪಾಲಕೃಷ್ಣ ಶೆಟ್ಟಿ ಮಾರ್ಕೊಡು, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ್, ಪ್ರಧಾನ ತಂತ್ರಿ ಪ್ರಸನ್ನಕುಮಾರ್ ಐತಾಳ್, ಟ್ರಸ್ಟ್‌ನ ಕಾರ್ಯದರ್ಶಿ ಕೆ.ರಾಜಗೋಪಾಲ ಆಚಾರ್ಯ, ಟ್ರಸ್ಟ್‌ನ ಸದಸ್ಯರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಗ್ರಾಪಂ. ಸದಸ್ಯರು ಉಪಸ್ಥಿತರಿದ್ದರು.
ಮಳೆಗಾಲದಲ್ಲಿ ದೇವಸ್ಥಾನದ ಆವರಣದಲ್ಲಿ ನೀರು ನಿಲ್ಲುತ್ತಿರುವ ಸಮಸ್ಯೆಯನ್ನು ಸ್ಥಳೀಯ ಮುಖಂಡರೇ ಬಗೆಹರಿಸಲು ಮುಂದಾಗಬೇಕು. ದೇವಸ್ಥಾನದಲ್ಲಿ ನಡೆಯುವ ನಿತ್ಯ ಕಾರ್ಯಕ್ರಮಗಳಿಗೆ ಅಡಚಣೆಯಾಗದಂತೆ ಕಾರ್ಯಪ್ರವೃತ್ತರಾಗಬೇಕು. ರಾಮಲಿಂಗಾ ರೆಡ್ಡಿ, ಚ್ಟ ಸಚಿವ