ಜಿಲ್ಲೆ

ಅಪಘಾತದಲ್ಲಿ ಗಾಯಗೊಂಡಿದ್ದವ ಸಾವು

ಚಿಂತಾಮಣಿ: ಚಿಂತಾಮಣಿ&ಮದನಪಲ್ಲಿ ರಸ್ತೆಯ ಐಮರೆಡ್ಡಿಹಳ್ಳಿ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಪಕ್ಕದ ಮೋರಿಗೆ ಡಿಕ್ಕಿಯಾಗಿ ಗಾಯಗೊಂಡಿದ್ದ ಐವರಲ್ಲಿ ಒಬ್ಬ ಭಾನುವಾರ ರಾತ್ರಿ ಚಿಕಿತ್ಸೆ ಲಿಸದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬೆಂಗಳೂರಿನ ಯಲಹಂಕ ತಾಲೂಕಿನ ಮಾರನಾಯಕನಹಳ್ಳಿ ವೆಂಕಟೇಶ್​ (45) ಮೃತ.

ನೆರೆಯ ಆಂಧ್ರಪ್ರದೇಶದ ಮದನಪಲ್ಲಿಯ ಬೋಯಿಕೊಂಡ ಗಂಗಮ್ಮ ದೇವಾಲಯದ ದರ್ಶನ ಮುಗಿಸಿಕೊಂಡು ಭಾನುವಾರ ಸಂಜೆ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಸೋಮವಾರ ಮರಣೋತ್ತರ ಪರೀೆ ನಂತರ ವಾರಸುದಾರರಿಗೆ ಮೃತದೇಹ ಹಸ್ತಾಂತರಿಸಲಾಯಿತು.