ಜಿಲ್ಲೆ

ಯೋಜನೆ ಘೋಷಣೆ ಮಾಡಬೇಕು

ಅವಿನಾಶ್ ಜೈನಹಳ್ಳಿ

ಮೈಸೂರು: ವಿದೇಶದ ರೀತಿ ಮೈಸೂರಿನಲ್ಲೂ ಕೈಗಾರಿಕಾ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬೇಕು ಎಂದು ಮೈಸೂರು ಕೈಗಾರಿಕೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್‌ಕುಮಾರ್ ಜೈನ್ ಒತ್ತಾಯಿಸಿದ್ದಾರೆ.

ಮೈಸೂರಿನ ಕೈಗಾರಿಕೆಗಳಲ್ಲಿ ಎಲ್ಲ ವಸ್ತುಗಳನ್ನು ಉತ್ಪಾದನೆ ಮಾಡಲಾಗುತ್ತಿದೆ. ಅವುಗಳನ್ನು ನೋಡುವ ಜತೆಗೆ, ಖರೀದಿಸಲು ಪ್ರವಾಸಿಗರಿಗೆ ಅವಕಾಶ ನೀಡಬೇಕು. ಹಾಗಾಗಿ, ಮೈಸೂರಿನ ಎಲ್ಲ ಪ್ರವಾಸಿ ತಾಣಗಳಲ್ಲೂ ಮೈಸೂರಿನ ಕೈಗಾರಿಕಾ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಬೇಕು. ಈ ಸಂಬಂಧ ಒಂದು ಯೋಜನೆ ಘೋಷಣೆ ಮಾಡಬೇಕು ಎಂದು ತಿಳಿಸಿದ್ದಾರೆ.