ಜಿಲ್ಲೆ

ಪೊಲೀಸರು ಸ್ವತಂತ್ರವಾಗಿ ತನಿಖೆ ನಡೆಸಿದ್ದಾರೆ

ರಾಯಚೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣಕ್ಕೆ ಸಂಬಂಸಿದಂತೆ ಪೊಲೀಸರು ಸ್ವತಂತ್ರವಾಗಿ ತನಿಖೆ ನಡೆಸುತ್ತಿದ್ದು, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಬಿಜೆಪಿಯವರು ಪ್ರಕರಣವನ್ನು ರಾಜಕೀಕರಣಗೊಳಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಸರ್ಕಾರ ಈಗಾಗಲೇ ಘಟನೆಯ ತನಿಖೆಗೆ ಸೂಚಿಸಿದ್ದು, ಮೂವರನ್ನು ಬಂಸಿ ವಿಚಾರಣೆ ನಡೆಸಲಾಗುತ್ತಿದೆ ಎಂದರು.
ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದಾಗ ಅಕಾರದಲ್ಲಿದ್ದ ಬಿಜೆಪಿ ಸರ್ಕಾರ ಏಕೆ ಕ್ರಮಕೈಗೊಳ್ಳಲಿಲ್ಲ. ಬಿಜೆಪಿಯವರು ಪಾಕಿಸ್ತಾನ ಪರ ಘೋಷಣೆ ಕೂಗಿದಾಗ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಕೊಡಬೇಕು ಎಂದು ಕೇಳಲು ಆಗುತ್ತಾ. ರಾಜ್ಯಸಭೆ ಸದಸ್ಯ ನಾಸೀರ ಹುಸೇನ್ ವಿರುದ್ಧ ಕ್ರಮಕೈಗೊಳ್ಳಬೇಕು ಎನ್ನುವುದಕ್ಕೆ ಅರ್ಥವಿಲ್ಲ.
ರಾಯಚೂರು ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ. ಈಗಾಗಲೇ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ನಾಲ್ವರ ಹೆಸರುಗಳನ್ನು ವರಿಷ್ಠರಿಗೆ ಕಳುಹಿಸಲಾಗಿದೆ.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಎಲ್ಲ ಡಿಸಿ, ಜಿ.ಪಂ. ಸಿಇಒಗಳೊಂದಿಗೆ ಸಭೆ ನಡೆಸಲಾಗಿದೆ. 851 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಜಲಾಶಯಗಳಲ್ಲಿ ಲಭ್ಯವಿರುವ ನೀರು ಬಳಸಿಕೊಂಡು ಕೆರೆ ತುಂಬುವ ಕೆಲಸ ನಡೆಸಲು ಸೂಚಿಸಲಾಗಿದೆ. ತಹಸೀಲ್ದಾರ್‌ಗಳ ಖಾತೆಗೆ ಹಣ ಜಮಾ ಮಾಡಲಾಗಿದ್ದು, ತುರ್ತು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಕೊಳವೆಬಾವಿ ಕೊರೆಸಲು ಅವಕಾಶ ಇಲ್ಲದಿದ್ದರೂ ಕೊರೆಸಲು ಸೂಚನೆ ನೀಡಲಾಗಿದೆ.
ತುಂಗಭದ್ರಾ ಮತ್ತು ನಾರಾಯಣಪುರ ಜಲಾಶಯಗಳಿಂದ ಕಾಲುವೆ ಮೂಲಕ ಕೆರೆಗಳನ್ನು ತುಂಬಿಸಲು ಸೂಚಿಸಲಾಗಿದ್ದು, ಶೇ.70ರಷ್ಟು ಜನರಿಗೆ ನದಿ ನೀರು ಒದಗಿಸಲಾಗುತ್ತಿದೆ. ಶೇ.30 ಉಳಿದ ಜನರಿಗೆ ಸಮರ್ಪಕ ನೀರು ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಎನ್.ಎಸ್.ಬೋಸರಾಜು ತಿಳಿಸಿದರು.
ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಜಯಣ್ಣ, ಮುಖಂಡರಾದ ಕೆ.ಶಾಂತಪ್ಪ, ಜಿ.ಶಿವಮೂರ್ತಿ ಉಪಸ್ಥಿತರಿದ್ದರು.