ಹೂವಿನಹಿಪ್ಪರಗಿ: ಹೋಬಳಿ ವ್ಯಾಪ್ತಿಯ ಎಲ್ಲ ಕೆರೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ರೈತರು ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹವನ್ನು ಕೆಬಿಜೆಎನ್‌ಎಲ್ ಅಧಿಕಾರಿಗಳ ಭರವಸೆ ಮೇರೆಗೆ ಧರಣಿ ಹಿಂಪಡೆಯಲಾಗಿದೆ ಎಂದು ಅಖಂಡ ಕರ್ನಾಟಕ ರೈತ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು.
ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಿಂದ ಗುರುವಾರ ಧರಣಿ ಹೊರಟು ಪರಮಾನಂದ ವೃತ್ತದ ಬಳಿ ಧರಣಿ ಸತ್ಯಾಗ್ರಹ ಕೈಗೊಂಡರು.
ಗುರುವಾರ ಪ್ರಾರಂಭಿಸಿದ ಧರಣಿ ನಿರತ ಸ್ಥಳಕ್ಕೆ ಕೆಬಿಜೆಎನ್‌ಎಲ್ ಅಧಿಕಾರಿಗಳು, ಬಸವನಬಾಗೇವಾಡಿ ತಹಸೀಲ್ದಾರ್ ಹಾಗೂ ಪೊಲೀಸ್ ಇಲಾಖೆಯ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆಸಿ ವಾರದಲ್ಲಿ ಕಾಲುವೆ ನೀರು ಹರಿಸಿ ಸಂಪೂರ್ಣ ಭರ್ತಿ ಮಾಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.
ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯ ಅರವಿಂದ ಕುಲಕರ್ಣಿ ಮಾತನಾಡಿ, ಪ್ರತಿಬಾರಿ ನೀರು ಹರಿಸುವಾಗ ಹೂವಿನಹಿಪ್ಪರಗಿ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ ಒಂದು ತೊಟ್ಟು ನೀರು ಬರುವುದಿಲ್ಲ. ಇದಕ್ಕೆ ಕಾರಣ ಕೆಲ ಕಿಡಿಗೇಡಿ ರೈತರು ನೀರು ಪೋಲು ಮಾಡುತ್ತಿದ್ದರಿಂದ ಸಾರಾಗವಾಗಿ ಕೆರೆಗಳಿಗೆ ನೀರು ತುಲುಪುತ್ತಿಲ್ಲ. ಹೀಗಾಗಿ ಈ ಭಾಗದ ಜನ- ಜಾನುವಾರುಗಳಿಗೆ ಕುಡಿಯಲು ನೀರು ಸಿಗುತ್ತಿಲ್ಲ. ಆದ್ದರಿಂದ ಕೆಬಿಜೆಎನ್‌ಎಲ್ ಅಧಿಕಾರಿಗಳು ನೀರು ಪೋಲಾಗುವುದನ್ನು ತಡೆದು ಕೆರೆಗೆ ನೀರು ತಲುಪಿಸುವಂತೆ ಕ್ರಮ ಕೈಗೊಳ್ಳಬೇಕು. ಸದ್ಯ ಬೇಸಿಗೆಯಿಂದಾಗಿ ಕೆರೆಗಳಲ್ಲಿ ಹನಿ ನೀರಿಲ್ಲ. ಆಲಮಟ್ಟಿ ಅಣೆಕಟ್ಟು ನಿರ್ಮಾಣ ಸಂದರ್ಭದಲಿ ಭೂಮಿ, ಮನೆ ಮಠ ಕಳೆದುಕೊಂಡು ಎಲ್ಲವನ್ನು ತ್ಯಾಗಮಾಡಿದ ಜಿಲ್ಲೆಯ ರೈತರಿಗೆ ಅಗತ್ಯ ಬಿದ್ದ ಸಂದರ್ಭ ನೀರು ಕೇಳಿದಾಗ ಯಾವುದೇ ಹಂತದ ನೆಪ ಹೇಳದೆ ಎಲ್ಲದಕ್ಕೂ ನೀರು ಕೊಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.
ಬಸವನ ಬಾಗೇವಾಡಿ ತಾಲೂಕು ಅಧ್ಯಕ್ಷ ಉಮೇಶ ವಾಲೀಕಾರ, ತಾಲೂಕಾಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ವಿಠ್ಠಲ ಬಿರಾದಾರ, ರಾಮನಗೌಡ ಹಾದಿಮನಿ, ಬಸನಗೌಡ ಪಾಟೀಲ, ಮೋಹನಗೌಡ ಪಾಟೀಲ, ಅಣ್ಣಪ್ಪ ರಾಠೋಡ, ಬಸವರಾಜ ಗುಂಡಳ್ಳಿ, ಶೇಖು ಕುಂಟೋಜಿ, ಸಿದ್ದು ಮೇಟಿ, ಆನಂದ ಕಾಖಂಡಕಿ, ಪ್ರಕಾಶ ಪಾಟೀಲ, ಈರಯ್ಯ ಚಿಕ್ಕಮಠ, ರುದ್ರಗೌಡ ಬಿರಾದಾರ, ಮಲ್ಲನಗೌಡ ನಾಡಗೌಡ, ಹಣಮಂತರಾಯ ಗುಣಕಿ ಇತರರಿದ್ದರು.
ಕೆಬಿಜೆಎನ್‌ಎಲ್ ಅಧೀಕ್ಷಕ ಅಭಿಯಂತರ ಗೋವಿಂದ ರಾಠೋಡ, ಕಾರ್ಯನಿರ್ವಾಹಕ ಅಭಿಯಂತರ ವಿ. ಎಲ್. ಶೇಗುಣಿಸಿ, ಬಸವನಬಾಗೇವಾಡಿ ತಹಸೀಲ್ದಾರ್ ವೈ.ಎಸ್. ಸೋಮನಗಕಟ್ಟಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್. ಎಸ್. ಸೂಳಿಭಾವಿ, ಬಸವರಾಜ ಬಂಕಾಪುರ, ಪೊಲೀಸ್ ಇಲಾಖೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಪೊಲೀಸ್ ಇನ್ಸ್‌ಪೆಕ್ಟರ್ ಗುರುಶಾಂತ ದಾಶ್ಯಾಳ ಧರಣಿ ಸ್ಥಳಕ್ಕೆ ಭೇಟಿ ನೀಡಿದರು.