ಜಿಲ್ಲೆ

ಬೆಕ್​ ಸವಾರ ಸ್ಥಳದಲ್ಲೇ ಸಾವು

ವಿಠ್ಠಲ ಹಣಮಂತ ಬಾಳೇಕುಂದ್ರಿ

ಎಂ.ಕೆ.ಹುಬ್ಬಳ್ಳಿ: ಇಲ್ಲಿನ ಉಪಪೊಲೀಸ್​ ಠಾಣೆ ಎದುರಿನ ರಾಷ್ಟ್ರೀಯ ಹೆದ್ದಾರಿ ತಡೆಗೋಡೆಗೆ ಬೆಕ್​ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮತಪಟ್ಟಿರುವ ಟನೆ ಮಂಗಳವಾರ ಸಂಭವಿಸಿದೆ. ಚನ್ನಮ್ಮನ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದ ಸಂಗಮೇಶ ಚವಲಗಿ(32) ಮೃತ ಬೆಕ್​ ಸವಾರ. ಹಿಂಬದಿ ಸವಾರ ಶಂಕರಗೌಡ ಪಾಟೀಲ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿಯಿಂದ ಧಾರವಾಡ ಕಡೆ ತಮ್ಮೂರಿಗೆ ತೆರಳುತ್ತಿದ್ದಾಗ ಎಂ.ಕೆ.ಹುಬ್ಬಳ್ಳಿ ಬಳಿ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ತಡೆಗೋಡೆಗೆ ಬೆಕ್​ ಡಿಕ್ಕಿಯಾಗಿ ಸವಾರನ ತಲೆಗೆ ಬಲವಾಗಿ ಪೆಟ್ಟುಬಿದ್ದಿದೆ. ಟನಾ ಸ್ಥಳಕ್ಕೆ ಸಿಪಿಐ ಶಿವಾನಂದ ಗುಡಗನಟ್ಟಿ, ಅಪರಾಧ ವಿಭಾಗದ ಪಿಎಸ್​ಐ ಪ್ರವಿಣ ಕೋಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಿತ್ತೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.