ಚಿಕ್ಕಮಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರಿಗೆ ಅಭಿನಂದನೆ ಹಾಗೂ ವಿಧಾನ ಪರಿಷತ್ ಚುನಾವಣಾ ಪೂರ್ವಭಾವಿ ಸಭೆಯನ್ನುz್ದÉÃಶಿಸಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿದರು. ಡಾ.ಕೆ.ಪಿ.ಅಂಶುಮAತ್, ಎಂ.ಎಲ್.ಮೂರ್ತಿ, ಗಾಯತ್ರಿ ಶಾಂತೇಗೌಡ, ಡಾ.ಡಿ.ಎಲ್.ವಿಜಯ್ ಕುಮಾರ್, ಎಚ್.ಪಿ.ಮಂಜೇಗೌಡ ಮತ್ತಿತರರಿದ್ದರು. 
ಜಿಲ್ಲೆ

ರಾಜಕೀಯ ಬೆಳವಣಿಗೆಯಲ್ಲಿ ಕಾರ್ಯಕರ್ತರ ಪಾತ್ರ ಮುಖ್ಯ

ಚಿಕ್ಕಮಗಳೂರು: ರಾಜಕೀಯ ಬೆಳವಣಿಗೆಯಲ್ಲಿ ಕಾರ್ಯಕರ್ತರ ಪಾತ್ರ ಅತಿಮುಖ್ಯ. ಪ್ರತಿ ಚುನಾವಣೆಯಲ್ಲಿ ಶ್ರಮವಹಿಸಿ ದುಡಿದಿರುವ ಕಾರ್ಯಕರ್ತರನ್ನು ಮರೆತು ಎಂದಿಗೂ ರಾಜಕಾರಣ ಮಾಡಲು ಸಾಧ್ಯವಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಕಾರ್ಯಕರ್ತರಿಗೆ ಅಭಿನಂದನೆ ಹಾಗೂ ವಿಧಾನ ಪರಿಷತ್ ಚುನಾವಣಾ ಪೂರ್ವಭಾವಿ ಸಭೆಯನ್ನುz್ದೆÃಶಿಸಿ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ರಾಜಕಾರಣದಲ್ಲಿ ಕಾರ್ಯನಿರ್ವಹಿಸಿದ ತಾವು ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕೆಲಸ ಮಾಡಿz್ದÉÃನೆ. ಚುನಾವಣಾ ಒತ್ತಡದಿಂದ ಸ್ವಲ್ಪಮಟ್ಟಿನ ಸಮಸ್ಯೆಗಳಾಗಿರಬಹುದು. ಅದನ್ನು ಹೊರತುಪಡಿಸಿದರೆ ನಾಯಕರ ಶ್ರೇಯೋಭಿವೃದ್ಧಿಗೆ ಶ್ರಮವಹಿಸಿದ ಕಾರ್ಯಕರ್ತರನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದರು.
ಈ ಹಿಂದಿನ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಬೂತ್ ಮಟ್ಟದಿಂದ ಪಕ್ಷದ ಅಭ್ಯರ್ಥಿ ಪರವಾಗಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ದುಡಿದಿದ್ದಾರೆ. ಇವರಿಗೂ ಮುಂದಿನ ದಿನಗಳಲ್ಲಿ ಉತ್ತಮ ರೀತಿಯಲ್ಲಿ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.
ಇದೀಗ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಾದ ಆಯನೂರು ಮಂಜುನಾಥ್ ಹಾಗೂ ಕೆ.ಕೆ.ಮಂಜುನಾಥ್ ಆಯಾಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಪರಿಣಿತರು. ಶಿಕ್ಷಕರು, ಪದವೀಧರರ ಸಮಸ್ಯೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸುವ ಗುಣವಿರುವ ಹಿನ್ನೆಲೆಯಲ್ಲಿ ಒಗ್ಗಟ್ಟಾಗಿ ಅವರನ್ನು ವಿಜಯಶಾಲಿಯಾಗಿಸಲು ಮುಂದಾಗಬೇಕು ಎಂದರು.
ಮೇ ೨೮ ರಿಂದ ಜೂನ್ ೩ ರ ವರೆಗೆ ಕಾರ್ಯಕರ್ತರು ಕ್ರಿಯಾಶೀಲರಾಗಿ ಪದವೀಧರರು ಹಾಗೂ ಶಿಕ್ಷಕರನ್ನು ಸಂಪರ್ಕಿಸಿ ಮನವೊಲಿಸಬೇಕು. ವಿಧಾನ ಪರಿಷತ್ತಿನಲ್ಲಿ ನಮ್ಮ ಸಂಖ್ಯೆ ಹೆಚ್ಚಾಗಬೇಕು. ವಿಧಾನ ಸಭೆಯಲ್ಲಿ ಪಾಸ್ ಆದ ಬಿಲ್‌ಗಳು ಪರಿಷತ್ತಿಗೆ ಬಂದಾಗ ಸೋಲು ಕಾಣಬಾರದು. ನಮ್ಮ ಸಂಖ್ಯೆ ಹೆಚ್ಚಿದ್ದರೆ ಸರ್ಕಾರಕ್ಕೆ ಮುಜುಗುರವಾಗುವುದನ್ನು ತಪ್ಪಿಸಬಹುದು ಎಂದು ಹೇಳಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ.ಅಂಶುಮAತ್ ಮಾತನಾಡಿ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬೂತ್ ಮಟ್ಟದಿಂದ ಬರುತ್ತಿರುವ ವರದಿಗಳು, ಸಾರ್ವಜನಿಕರ ಅಭಿಪ್ರಾಯದ ಪ್ರಕಾರ ಜಯಪ್ರಕಾಶ ಹೆಗ್ಡೆ ಅವರು ಗೆಲ್ಲುವುದು ನಿಶ್ಚಿತ. ಈ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಎಲ್ಲ ಶಾಸಕರು, ಕಾರ್ಯಕರ್ತರು, ಮುಖಂಡರು ನಮ್ಮದೇ ಚುನಾವಣೆ ಎಂದು ಭಾವಿಸಿ ಕೆಲಸ ಮಾಡಿದ್ದಾರೆ. ಫಲಿತಾಂಶದ ನಂತರ ಪಕ್ಷವನ್ನು ಹೇಗೆ ಕಟ್ಟಬೇಕು ಎಂದು ಸಮಾಲೋಚನೆ ನಡೆದಿದೆ. ಸಂಘಟನೆಯನ್ನ ಕ್ರಿಯಾತ್ಮಕವಾದ ಹಾದಿಗೆ ತೆಗೆದುಕೊಂಡು ಹೋಗುತ್ತಿz್ದÉÃವೆ. ಪ್ರತಿ ಬೂತ್‌ನ ವಿಮರ್ಶೆ ಮಾಡುವ ಪ್ರಯತ್ನ ನಡೆದಿರುವುದು ವಿಶೇಷವಾದ ವಿಚಾರ ಎಂದು ಹೇಳಿದರು.
ನೈಋತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯನ್ನೂ ಗಂಭೀರವಾಗಿ ಎದುರಿಸಬೇಕು ಎನ್ನುವ ಸಂದೇಶವನ್ನು ಮುಖ್ಯಮಂತ್ರಿ ಸೇರಿದಂತೆ ಕೆಪಿಸಿಸಿ ಅಧ್ಯಕ್ಷರು ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್‌ನ ಎಲ್ಲ ಪದಾಧಿಕಾರಿಗಳ ಸಭೆ ನಡೆಸಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಲಾಗಿದೆ ಎಂದು ತಿಳಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ ಮಾತನಾಡಿ, ಜಯಪ್ರಕಾಶ್ ಹೆಗ್ಡೆ ಪರ ಚುನಾವಣಾ ಪ್ರಚಾರ ಕಾರ್ಯ ಈ ಬಾರಿ ಬಹಳ ಚೆನ್ನಾಗಿ ನಡೆದಿದೆ. ಎಲ್ಲ ಕಾರ್ಯಕರ್ತರು ತೃಪ್ತಿಯಿಂದ ಕೆಲಸ ಮಾಡಿದ್ದಾರೆ. ಜಯಪ್ರಕಾಶ್ ಹೆಗ್ಡೆ ಅವರು ಉತ್ತಮ ಸಂಸದೀಯ ಪಟುವಾಗಿದ್ದಾರೆ. ಈ ಕಾರಣಕ್ಕೆ ಅವರು ಸಂಸತ್‌ಗೆ ಹೋಗಬೇಕಾದ ಅಗತ್ಯವಿದೆ ಎಂದರು.
ಈ ಬಾರಿ ಜಯಪ್ರಕಾಶ್ ಹೆಗ್ಡೆ ಅವರು ಉತ್ತಮ ಅಂತರದಿAದ ಗೆಲುವು ಸಾಧಿಸುತ್ತಾರೆ. ಅವರು ಗೆಲ್ಲುವುದು ಧರ್ಮ ಸಹ. ನಮ್ಮಲ್ಲಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವುದರಲ್ಲಿ ಸಮರ್ಥರಿದ್ದಾರೆ ಎಂದು ಹೇಳಿದರು.
ಈ ಬಾರಿ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕೆ.ಕೆ. ಮಂಜುನಾಥ್‌ಕುಮಾರ್ ಮತ್ತು ಆಯನೂರು ಮಂಜುನಾಥ್ ಸ್ಪರ್ಧಿಸಿದ್ದಾರೆ. ಎಲ್ಲ ಪದವೀಧರರಿಗೆ ಕಾಂಗ್ರೆಸ್ ಸರ್ಕಾರ ಉದ್ಯೋಗ ಸಿಗುವವರೆಗೆ ಯುವನಿಧಿ ಜಾರಿಗೆ ತಂದಿದೆ. ಸರ್ಕಾರಿ ನೌಕರರಿಗೆ ಎನ್‌ಪಿಎಸ್ ರದ್ದು ಮಾಡಿ ಹಳೆ ಪಿಂಚಣಿ ವ್ಯವಸ್ಥೆ (ಒಪಿಎಸ್) ಜಾರಿಗೊಳಿಸುವುದಾಗಿ ಭರವಸೆ ನೀಡಿರುವುದು ಈ ಚುನಾವಣೆಯಲ್ಲಿಯೂ ನಮ್ಮ ಗೆಲುವಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ. ಡಿ.ಎಲ್.ವಿಜಯಕುಮಾರ್, ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾಹುಲಿಯಪ್ಪಗೌಡ ಮತ್ತಿತರರಿದ್ದರು.