ಮೈಸೂರು: ಆರೋಗ್ಯವಂತ ಸಮಾಜಕ್ಕೆ ವೈದ್ಯರ ಪಾತ್ರ ಹಿರಿದಾದುದು ಎಂದು ಬೆಂಗಳೂರಿನ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸಂಶೋಧನಾ ಮತ್ತು ಅಭಿವೃದ್ಧಿ ವಿಭಾಗದ ಮುಖ್ಯಸ್ಥೆ ಡಾ.ಸ್ಮಜಾ ಕೆ.ಶ್ರೀಧರ್ ಅಭಿಪ್ರಾಯ ಪಟ್ಟರು.
ನಗರದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ 2024-25ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಆಯುರ್ವೇದಕ್ಕೆ ತನ್ನದೇ ಆದ ಮಹತ್ವವಿದ್ದು, ಆರೋಗ್ಯವಂತ ಸಮಾಜಕ್ಕೆ ವೈದ್ಯರ ಪಾತ್ರ ಹಿರಿದಾಗಿದೆ. ಈ ನಿಟ್ಟಿನಲ್ಲಿ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸಂಶೋಧನಾ ಮತ್ತು ಅಭಿವೃದ್ಧಿ ಹೆಚ್ಚಿನ ರೀತಿಯಲ್ಲಿ ವೈದ್ಯ ವಿದ್ಯಾರ್ಥಿಗಳ ಜ್ಞಾನ ಹೆಚ್ಚಿಸಲು ಶ್ರಮಿಸುತ್ತಿದೆ ಎಂದರು.
ಚಿಂತಕಿ ಡಾ.ಜ್ಯೋತಿ ಶಂಕರ್ ಮಾತನಾಡಿ, ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಇಚ್ಛಾಶಕ್ತಿ ಮತ್ತು ಜ್ಞಾನದ ಹಸಿವು ಹೆಚ್ಚಾಗಿರಬೇಕು. ವೈದ್ಯರು ಸಮಾಜ ಮುಖಿಯಾಗಿ ಸೇವೆ ಸಲ್ಲಿಸಿದಾಗ ಮಾತ್ರ ಅವರು ಓದಿದ ವಿದ್ಯೆಗೆ ಅರ್ಥ ಸಿಗುತ್ತದೆ ಎಂದರು.
ಪ್ರಾಚಾರ್ಯರಾದ ಡಾ.ಗಜಾನನ ಹೆಗಡೆ ಮಾತನಾಡಿ, ವಿದ್ಯಾರ್ಥಿ ದಿಸೆಯಿಂದಲೇ ಸ್ವಸ್ತ ಸಮಾಜದ ಏಳಿಗೆಗೆ ಶ್ರಮಿಸಬೇಕು ಪರೋಪಕಾರ ಮನೋಭಾವನೆಯಿಂದ ಸೇವೆ ಸಲ್ಲಿಸಬೇಕು ಎಂದು ವಿದ್ಯಾರ್ಥಿಗಳಿಗೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸಾಂಸ್ಕೃತಿಕ ಸಮಿತಿಯ ಸಲಹೆಗಾರ್ತಿ ಡಾ.ಎನ್.ನಳಿನಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಎಚ್.ಎಸ್.ಅಭಿಷೇಕ್, ಡಾ. ಪೂಜಾ ಇದ್ದರು.