ರಾಯಚೂರಿನ ಕನ್ನಡ ಭವನದಲ್ಲಿ ಜಿಲ್ಲಾ ಗೃಹರಕ್ಷಕ ದಳದಿಂದ ಭಾನುವಾರ ಏರ್ಪಡಿಸಿದ್ದ ಅಖಿಲ ಭಾರತ ಗೃಹರಕ್ಷಕ ದಳದ ವಾರ್ಷಿಕ ದಿನಾಚರಣೆ ಕಾರ್ಯಕ್ರಮವನ್ನು ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಉದ್ಘಾಟಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಡಾ.ಆರ್.ಶಿವಕುಮಾರ, ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಠ ಜಂಬಣ್ಣ ರಾಮಸ್ವಾಮಿ, ಕಂಪನಿ ಕಮಾಂಡರ್ ರಾಣೋಜಿ, ಸಹಾಯಕ ಬೋಧಕ ಲಾಲ್‌ಸಾಬ್ ಅನ್ವರ ಇದ್ದರು. 
ಜಿಲ್ಲೆ

ಕಾನೂನು ಸುವ್ಯವಸ್ಥೆಯಲ್ಲಿ ಗೃಹರಕ್ಷಕರ ಪಾತ್ರ ಅಮೂಲ್ಯ

ರಾಯಚೂರು: ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ರಕ್ಷಕರ ಪಾತ್ರ ಅತ್ಯಮೂಲ್ಯವಾಗಿದ್ದು, ಕೋವಿಡ್ ಸಂದರ್ಭದಲ್ಲಿ ಗೃಹರಕ್ಷಕರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸಿರುವುದನ್ನು ಮರೆಯಲು ಸಾಧ್ಯವಿಲ್ಲ ಎಂದು ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಹೇಳಿದರು.
ಸ್ಥಳೀಯ ಕನ್ನಡ ಭವನದಲ್ಲಿ ಜಿಲ್ಲಾ ಗೃಹರಕ್ಷಕ ದಳದಿಂದ ಭಾನುವಾರ ಏರ್ಪಡಿಸಿದ್ದ ಅಖಿಲ ಭಾರತ ಗೃಹರಕ್ಷಕ ದಳದ ವಾರ್ಷಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪೊಲೀಸ್ ಇಲಾಖೆಯೊಂದಿಗೆ ಕೋವಿಡ್, ಪ್ರವಾಹ ಮುಂತಾದ ಸಂದರ್ಭದಲ್ಲಿ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುವ ಮೂಲಕ ಗೃಹರಕ್ಷಕರು ಸೇವೆ ಸಲ್ಲಿಸಿದ್ದಾರೆ ಎಂದು ಶ್ಲಾಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಡಾ.ಆರ್.ಶಿವಕುಮಾರ ಮಾತನಾಡಿ, ಗೃಹ ರಕ್ಷಕರು ಸೇವೆಯ ಮೂಲಕ ಬದುಕನ್ನು ಕಟ್ಟಿಕೊಂಡಿದ್ದಾರೆ. ಪೊಲೀಸ್ ಇಲಾಖೆಗೆ ಸಹಕಾರಿಯಾಗಿ ಸ್ವಯಂ ಸೇವಾ ಸಂಸ್ಥೆಯಾಗಿ ಗೃಹರಕ್ಷಕ ದಳ ಪ್ರತಿ ಹಂತದಲ್ಲಿಯೂ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಠ ಜಂಬಣ್ಣ ರಾಮಸ್ವಾಮಿ ಮಾತನಾಡಿ, ಯಾವುದೇ ಲಾಪೇಕ್ಷೆಯಿಲ್ಲದೆ ಗೃಹ ರಕ್ಷಕರು ನಿಸ್ಕಾಮ ಸೇವೆ ಸಲ್ಲಿಸುತ್ತಿದ್ದಾರೆ. ನಿಮಗೆ ವಹಿಸಿದ ಯಾವುದೇ ಕೆಲಸ ಕಾರ್ಯಗಳನ್ನು ಪ್ರಾಮಾಣಿಕತೆ, ನಿಷ್ಠೆಯಿಂದ ಕಾರ್ಯನಿರ್ವಹಿಸುವ ಮೂಲಕ ಸಂಸ್ಥೆಗೆ ಉತ್ತಮ ಹೆಸರು ತರಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಿಗೆ ಸನ್ಮಾನಿಸಿ, ಗೌರವಿಸಲಾಯಿತು. ಕಂಪನಿ ಕಮಾಂಡರ್ ರಾಣೋಜಿ, ಸಹಾಯಕ ಬೋಧಕ ಲಾಲ್‌ಸಾಬ್ ಅನ್ವರ, ಸೈಯದ್ ಜಾವೇದ್ ಪಾಷಾ, ನಿಂಬನಗೌಡ, ಎನ್.ಬಸವರಾಜ, ಸುಭಾಷಚಂದ್ರ, ಎಚ್.ಮಲ್ಲಿಕಾರ್ಜುನ, ಭವಾಂಜಿರಾವ್ ಉಪಸ್ಥಿತರಿದ್ದರು.