ಗುಂಡ್ಲುಪೇಟೆ ಪಟ್ಟಣದ ಗುರುಭವನದಲ್ಲಿ ಲೆತ್ತೀಷ್ಯಾ ಚಿನ್ನಪ್ಪ, ಸರಸ್ವತಿ, ಮಂಜುಳಾ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ರಾಜಶೇಖರ್, ಚಿಕ್ಕಮಲ್ಲಪ್ಪ ಇದ್ದರು. 
ಜಿಲ್ಲೆ

ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಅನನ್ಯ

ಗುಂಡ್ಲುಪೇಟೆ: ಮಕ್ಕಳ ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ದೊಡ್ಡದು ಎಂದು ಬಿಇಒ ರಾಜಶೇಖರ್ ಹೇಳಿದರು.

ಬೇರೆಡೆ ವರ್ಗಾವಣೆಗೊಂಡ ದೈಹಿಕ ಶಿಕ್ಷಣ ಶಿಕ್ಷಕರನ್ನು ಪಟ್ಟಣದ ಗುರುಭವನದಲ್ಲಿ ಗುರುವಾರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಮಾತನಾಡಿದರು.

ಗ್ರಾಮಾಂತರ ಪ್ರದೇಶಗಳ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡಲಾಗುತ್ತಿದ್ದು, ದೈಹಿಕ ಶಿಕ್ಷಣ ನೀಡಲಾಗುತ್ತಿರುವ ಶಾಲೆಗಳಲ್ಲಿ ಕಲಿಯುವ ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಮೆಚ್ಚುಗೆವ್ಯಕ್ತಪಡಿಸಿದರು.

ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಚಿಕ್ಕಮಲ್ಲಪ್ಪ, ವರ್ಗಾವಣೆಯಾದ ಶಿಕ್ಷಕಿಯರಾದ ಲೆತ್ತೀಷ್ಯಾ ಚಿನ್ನಪ್ಪ, ಸರಸ್ವತಿ, ಮಂಜುಳಾ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಇದ್ದರು.