ಜಿಲ್ಲೆ

ಬಲಿಷ್ಠ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅನನ್ಯ

ಕಡೂರು: ಬಲಿಷ್ಠ ಸಮಾಜ ನಿರ್ಮಿಸುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ವಿಭಾಗದ ನಿರ್ದೇಶಕಿ ಗೀತಾ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಅಜ್ಜಂಪುರ ತಾಲೂಕು ಯಗಟಿ ವಲಯದಿಂದ ತಾಲೂಕಿನ ಯಗಟಿಪುರ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಸಮುದಾಯ ಭವನದಲ್ಲಿ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ದೇಶದ ಆರ್ಥಿಕ ಮತ್ತು ಶೈಕ್ಷಣಿಕ ಬೆಳವಣಿಗೆಯಲ್ಲಿಯೂ ಮುಂಚೂಣಿ ಸ್ಥಾನದಲ್ಲಿ ಪ್ರಗತಿ ಸಾಧಿಸುತ್ತಿದ್ದು, ಪ್ರಸ್ತುತ ದಿನಗಳಲ್ಲಿ ಸವಾಲು ಒಡ್ಡುವಂತಹ ಯಾವುದೇ ಕ್ಷೇತ್ರದಲ್ಲಿಯೂ ಮಹಿಳೆ ಯಶಸ್ವಿಯಾಗ ಬಲ್ಲ ದಿಟ್ಟತನ ಪ್ರದರ್ಶಿಸುತ್ತಿದ್ದಾರೆ. ಸಮಸ್ಯೆ ಮೆಟ್ಟಿನಿಲ್ಲುವ ಧೈರ್ಯ ತೋರಿದರೆ ಯಶಸ್ಸು ಮಹಿಳೆ ಪಾಲಾಗುತ್ತದೆ. ಸ್ವದ್ಯೋಗದಲ್ಲಿ ತೊಡಗಿಸಿಕೊಳ್ಳುವುದು, ಮನೆಯವರೊಂದಿಗೆ ಪ್ರೀತಿ, ಬಾಂಧವ್ಯದೊಂದಿಗೆ ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಮುನ್ನಡಿಯಾಗಲಿದ್ದಾರೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸಮುದಾಯ ಆರೋಗ್ಯ ಇಲಾಖೆ ವೈದ್ಯಾಧಿಕಾರಿ ಡಾ.ಟಿ.ಎಸ್.ಅಕ್ಷಿತಾ ಆಧುನಿಕತೆಯಲ್ಲಿ ಆಹಾರ ಪದ್ಧತಿಗಳ ಕುರಿತು ಮಾಹಿತಿ ನೀಡಿದರು. ಜಿ.ಕೆ.ಶಾರದಾ ಅಧ್ಯಕ್ಷತೆ ವಹಿಸಿದ್ದರು. ಅಜ್ಜಂಪುರ ತಾಲೂಕು ಯೋಜನಾಧಿಕಾರಿ ಸಂಜೀವ ಗೌಡ, ಕೊರಗಪ್ಪ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯೆ ಕವಿತಾ, ಶಿವಲಿಂಗಸ್ವಾಮಿ ಮತ್ತಿತರಿದ್ದರು.