ಶ್ರೀರಂಗಪಟ್ಟಣ: ತಾಲೂಕಿನ ವಿವಿಧೆಡೆ ಹಲವು ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಮದ್ಯವನ್ನು ಗುರುವಾರ ಅಬಕಾರಿ ಇಲಾಖೆ ಅಧಿಕಾರಿಗಳು ನಾಶಪಡಿಸಿದರು.
ತಾಲೂಕಿನ ಗೆಂಡೆಹೊಸಹಳ್ಳಿ ಹೊರ ವಲಯದಲ್ಲಿ 627.170 ಲೀಟರ್ ಮದ್ಯ, 68.500 ಬಿಯರ್, 28 ಲೀ.ಸೇಂದಿಯನ್ನು ಜಿಲ್ಲಾ ಅಬಕಾರಿ ಇಲಾಖೆ ಡೆಪ್ಯೂಟಿ ಕಮಿಷನರ್ ಅವರ ನಿರ್ದೇಶನದಂತೆ ಪಾಂಡವಪುರ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕಿ ರಮ್ಯಾ ಅವರ ನೇತೃತ್ವದಲ್ಲಿ ಕಂದಾಯ, ಪೊಲೀಸ್ ಹಾಗೂ ಕೆಎಸ್‌ಬಿಸಿಎಲ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಿಸರಕ್ಕೆ ಹಾನಿಯಾಗದಂತೆ ನಾಶಪಡಿಸಿದರ