ಜಿಲ್ಲೆ

ಪರಿಹಾರಕ್ಕೆ ರಾಜ್ಯ ಸರ್ಕಾರ ಬಳಿ ಹಣವಿಲ್ಲ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯದಲ್ಲಿ ಹೆಚ್ಚು ಮಳೆಯಾಗಿ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಆದರೆ ಪರಿಹಾರ ನೀಡಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಮುಂದಾಲೋಚನೆ ಇಲ್ಲದೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಇದರಿಂದ ಜನರ ಸಂಕಷ್ಟಗಳಿಗೆ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.
ಮಳೆಯಿಂದ ಪೂರ್ಣ ಪ್ರಮಾಣ ಹಾನಿಯಾದ ಮನೆಗೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 5 ಲಕ್ಷ ರೂ. ಪರಿಹಾರ ನೀಡಲಾಗಿತ್ತು. ಆದರೆ ಈಗಿನ ರಾಜ್ಯ ಸರ್ಕಾರ ಪ್ರಧಾನಮಂತ್ರಿ ಆವಾಸ್​ ಯೋಜನೆಯ ಹಣ ಕೊಟ್ಟು ಕೈ ತೊಳೆದುಕೊಳ್ಳುತ್ತಿದೆ ಎಂದರು.