ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  
ಜಿಲ್ಲೆ

ರಾಜ್ಯಕ್ಕೆ ಗ್ರಹಣ ಹಿಡಿದಂತಾಗಿದೆ: ಬಿ.ವೈ.ವಿಜಯೇಂದ್ರ

ನವೀನ ಬಿ.ಎಂ

ಶಿವಮೊಗ್ಗ: ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಸರ್ಕಾರ, ಅದರಲ್ಲೇ ಜನರು ಸಂತೋಷ ನೆಮ್ಮದಿಯಿಂದ ಇದ್ದಾರೆಂಬ ಭ್ರಮೆಯಲ್ಲಿದೆ. ಅದೇ ಉತ್ತಮ ಆಡಳಿತವೆಂದು ವಾದ ಮಾಡುತ್ತಿದ್ದಾರೆ. ಆದರೆ ವಾಸ್ತವಿಕ ಸತ್ಯ ಬೇರೆಯೇ ಇದೆ. ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಅಭಿವೃದ್ಧಿಯೇ ಸ್ಥಗಿತವಾಗಿದೆ. ಯಾವ ಅಭಿವೃದ್ಧಿ ಕಾರ್ಯಗಳೂ ಆಗುತ್ತಿಲ್ಲ. ರಾಜ್ಯಕ್ಕೆ ಗ್ರಹಣ ಹಿಡಿದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ದಿನಗಳಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಶಿವಮೊಗ್ಗದ ಪಿ.ಚಂದ್ರಶೇಖರ್, ಕಾಂಗ್ರೆಸ್ ಶಾಸಕನ ಪುತ್ರನ ಕಿರುಕುಳದಿಂದ ಪಿಎಸ್‌ಐ ಪರಶುರಾಮ್, ಬೆಳಗಾವಿ ಸಚಿವರ ಪಿಎ ಕಿರುಕುಳದಿಂದ ಅಲ್ಲಿನ ತಹಸೀಲ್ದಾರ್ ಕಚೇರಿ ಎಸ್‌ಡಿಎ, ಕಲ್ಬುರ್ಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಬಲಗೈ ಬಂಟನ ಕಿರುಕುಳದಿಂದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.