ಜಿಲ್ಲೆ

7ರಂದು ವಾಟದಹೊಸಹಳ್ಳಿ ಹೋರಾಟ ತೀವ್ರ

ಗೌರಿಬಿದನೂರು: ವಾಟದಹೊಸಹಳ್ಳಿ ಕೆರೆ ನೀರನ್ನು ನಗರಕ್ಕೆ ಹರಿಸುವ ಯೋಜನೆ ಕೈಬಿಡಬೇಕು ಎಂದು ಆಗ್ರಹಿಸಿ ನಡೆಸುತ್ತಿರುವ ಅರ್ನಿದಿಷ್ಟಾವಧಿ ಧರಣಿ 30ನೇ ದಿನವೂ ಮುಂದುವರಿಯಿತು. ಕೆರೆ ಅಚ್ಚುಕಟ್ಟುದಾರರ ಸಂಘದ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಲಾಗುತ್ತಿದೆ.ರೈತ ಮುಖಂಡ ಮಾಳಪ್ಪ ಮಾತನಾಡಿ, ನಿರಂತರ ಹೋರಾಟ ನಡೆಸುತ್ತಿದ್ದರೂ ಜನಪ್ರತಿನಿಧಿಗಳು ಹಾಗೂ ಆಡಳಿತ ವರ್ಗ ಸ್ಪಂದಿಸುತ್ತಿಲ್ಲ. ಆದ್ದರಿಂದ ಸೆ.7 ರಿಂದ ಹೋರಾಟ ತೀವ್ರಗೊಳಿಸಲಾಗುವುದು ಎಂದರು. ಮುಖಂಡ ಹರ್ಷವರ್ಧನ ರೆಡ್ಡಿ ಮಾತನಾಡಿ, ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸರ್ವಪಕ್ಷಗಳ ಸಭೆ ಕರೆಯಬೇಕು. ಯೋಜನೆ ಸಾಧಕ&ಬಾಧಕಗಳ ಬಗ್ಗೆ ಚರ್ಚಿಸಿ ಜನತೆಗೆ ಮಾಹಿತಿ ಒದಗಿಸಬೇಕು. ಬಳಿಕ ಅಂತಿಮ ತೀಮಾರ್ನ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.