ಮಡಿಕೇರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಮೂರ್ನಾಡು ವೃತ್ತದ ೨೦ ಅಂಗನವಾಡಿ ಕೇಂದ್ರ ಹಾಗೂ ಮೂರ್ನಾಡು ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಸುಮಾರು ೪೦೦ ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸಲಾಗಿತ್ತು.
ಮೂನಾಡುವಿನ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ಛದ್ಮವೇಶ, ನೃತ್ಯ, ಅಭಿನಯ ಗೀತೆ ಸ್ಪರ್ಧೆಯಲ್ಲಿ ಪಾಲ್ಗೊಂಡು ಪದಕಗಳನ್ನು ಪಡೆದರು. ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಪ್ರಶಸ್ತಿ ಪತ್ರ, ಬಹುಮಾನ, ಡ್ರಾಯಿಂಗ್ ಪುಸ್ತಕ ವಿತರಣೆ ಮಾಡಲಾಯಿತು. ಮಕ್ಕಳ ಪಾಲಕರು, ಶಿಕ್ಷಕರು, ಅಂಗನವಾಡಿ ಶಿಕ್ಷಕರು, ಸಹಾಯಕರಿಗೂ ವಿವಿಧ ರೀತಿಯ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ವಿಜೇತರಿಗೆ ಪದಕಗಳನ್ನು ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿತ ಪೊನ್ನಮ್ಮ ಶಾಲಾ ವಿದ್ಯಾರ್ಥಿನಿರವರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಕಾಂತೂರು ಮೂರ್ನಾಡು ಅಧ್ಯಕ್ಷ ಕುಶನ್ ರೈ, ಉಪಾಧ್ಯಕ್ಷೆ ದಿವ್ಯ, ಶಾಲಾ ಶಿಕ್ಷಕರಾದ ರಾಜೇಶ್, ಹಾಗೂ ದಸರಾ ಸಾಂಸ್ಕೃತಿಕ ಸಮಿತಿಯ ಸಂಚಾಲಕರು ತನ್ನಿರಾ ಮೈನ ಹಾಗೂ ಇದೇ ನವೆಂಬರ್‌ನಲ್ಲಿ ನಿವೃತ್ತಿ ಹೊಂದುವ ಹಿರಿಯ ಮುಖ್ಯ ಶಿಕ್ಷಕರಾದ ವಿ.ಕೆ.ಲಲಿತಾರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ತೆನ್ನಿರ ಮೈನಾ ಮಾತನಾಡಿ, ಅಂಗನವಾಡಿ ಕೇಂದ್ರದ ಮಕ್ಕಳ ಪ್ರತಿಭೆಗೆ ಹಾಗೂ ಅಂಗನವಾಡಿ ಶಿಕ್ಷಕರು ಮತ್ತು ಸಹಾಯಕಿಯರ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕಾರ್ಯಕ್ರಮದ ಆಯೋಜನೆಗಾಗಿ ಮೇಲ್ವಿಚಾರಕರನ್ನು ಹಾಗೂ ಶಿಕ್ಷಕ ವೃಂದದವರನ್ನು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಚಂದ್ರ ಮೌಳಿ, ಅಂಗನವಾಡಿ ಕೇಂದ್ರದ ಬಾಲ ವಿಕಾಸ ಸಮಿತಿಯ ಸದಸ್ಯರು ಪಾಳ್ಗೊಂಡಿದ್ದರು.
ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ಶಾಲೆಯ ದೈಹಿಕ ಶಿಕ್ಷಕಿ ಪ್ರೇಮಲತಾ ನಡೆಸಿಕೊಟ್ಟರು. ಕಾರ್ಯಕ್ರಮಕ್ಕೆ ಶ್ರಮಿಸಿದ ಬಾಡಗ ಅಂಗನವಾಡಿ ಕಾರ್ಯಕರ್ತೆ ಬಿ.ಬಿ.ಜಯಂತಿ, ಗಾಂಧಿನಗರ ಅಂಗನವಾಡಿ ಕಾರ್ಯಕರ್ತೆ ಪಿ.ಯು.ಚೈತ್ರ, ಶಾಸ್ತ್ರೀನಗರ ಕಾರ್ಯಕರ್ತೆ ಪ್ರಮೀಳಾ, ಬಾಡಗ ಸೆಕೆಂಡ್ ಅಂಗನವಾಡಿ ಕಾರ್ಯಕರ್ತೆ ಭವ್ಯರವರಿಗೆ ಪದಕ ಹಾಗೂ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.