ಜಿಲ್ಲೆ

ಶಿಕ್ಷಕರ ಮೇಲಿದೆ ಉತ್ತಮ ಸಂಸ್ಕಾರ ನೀಡುವ ಹೊಣೆ

ವಿಜಯವಾಣಿ ಸುದ್ದಿಜಾಲ ಉಳ್ಳಾಲ

ವಿದ್ಯಾರ್ಥಿಗಳು ಗುರು, ಹಿರಿಯರನ್ನು ಗೌರವಿಸುವುದರ ಜತೆಗೆ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗೌರವಿಸಿದಾಗ ದೇಶದ ಉತ್ತಮ ಪ್ರಜೆಯಾಗಲು ಸಾಧ್ಯ. ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ನೀಡಬೇಕು ಎಂದು ಮಂಗಳೂರು ದಕ್ಷಿಣ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂದ ಅಧ್ಯಕ್ಷ ಶೇಖರ ಕಡ್ತಲ ಹೇಳಿದರು.

ಕೊಣಾಜೆ ವಿಶ್ವಮಂಗಳ ವಿದ್ಯಾಸಂಸ್ಥೆಯಲ್ಲಿ ಶನಿವಾರ ವಾರ್ಷಿಕ ಕ್ರೀಡೋತ್ಸವ ಉದ್ಘಾಟಿಸಿ ಮಾತನಾಡಿದರು.

ವಿಶ್ವಮಂಗಳ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ವಿಶ್ವನಾಥ ಅಧ್ಯಕ್ಷತೆ ವಹಿಸಿ, ಸರ್ಕಾರ ಕ್ರೀಡೆಗೆ ಹೆಚ್ಚು ಮಹತ್ವ ನೀಡಬೇಕು. ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು.

ಆಡಳಿತ ಮಂಡಳಿಯ ಕಾರ್ಯದರ್ಶಿ ಪೊ.ವಿನಯರಜತ್ ಡಿ., ಕೋಶಾಧಿಕಾರಿ ಡಾ.ಪರಮೇಶ್ವರ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಪ್ರಿಯಾ ಎನ್., ಪೂರ್ವ ಪ್ರಾಥಮಿಕ ಶಾಲಾ ಮುಖ್ಯಸ್ಥೆ ಹಂಸಗೀತಾ, ರಕ್ಷಕ- ಶಿಕ್ಷಕ ಸಂದ ಅಧ್ಯಕ್ಷ ಹರೀಶ್ ಪೂಜಾರಿ ಮೊದಲಾದವರಿದ್ದರು. ವಿದ್ಯಾರ್ಥಿ ಮಯಾಂಕ್ ಪಿ.ಅಂಚನ್ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಪೂರ್ಣಿವಾ ಡಿ.ಶೆಟ್ಟಿ ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಮುಖ್ಯಸ್ಥೆ ಶೋಭಾವತಿ ವಂದಿಸಿದರು. ವಿದ್ಯಾರ್ಥಿನಿ ಫಾತಿವಾ ಅಪ್ರೀನಾ ಕಾರ್ಯಕ್ರಮ ನಿರ್ವಹಿಸಿದರು.