ಜಿಲ್ಲೆ

ಸರಗಳ್ಳನ ಬಂಧಿಸಿ 45 ಗ್ರಾಂ ತೂಕದ ಚಿನ್ನದ ಸರ ವಶ

ಮೈಸೂರು:  ಸರಗಳ್ಳನನ್ನು ಬಂಧಿಸಿರುವ ಕುವೆಂಪುನಗರ ಠಾಣೆ ಪೊಲೀಸರು ಆರೋಪಿಯಿಂದ 2.80 ಲಕ್ಷ ರೂ. ಮೌಲ್ಯದ 45 ಗ್ರಾಂ ತೂಕದ ಎರಡು ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ.

ಶ್ರೀರಾಂಪುರದ ಮಧುವನ ಬಡಾವಣೆ ಕ್ರಾಸ್‌ನಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಸರವನ್ನು ಕಿತ್ತು ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಕುವೆಂಪುನಗರ ಠಾಣೆ ಪೊಲೀಸರು, ದೊರೆತ ಖಚಿತ ವರ್ತಮಾನದ ಮೇರೆಗೆ ಜಗನ್ಮೋಹನ ಆರಮನೆ ಬಳಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ್ದ ಹೋಂಡಾ ಆಕ್ಟಿವಾ ಸ್ಕೂಟರ್ ಮತ್ತು ಪ್ರಕರಣಗಳಿಗೆ ಸಂಬಂಧಪಟ್ಟ ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.