ವಿಜಯಪುರ ಗೋಳಗುಮ್ಮಟ ಪೊಲೀಸ್ ಠಾಣೆ ಆವರಣದಲ್ಲಿ ಎಸ್‌ಪಿ ಋಷಿಕೇಶ ಸೋನಾವಣೆ ಸುದ್ದಿಗೋಷ್ಠಿ ನಡೆಸಿದರು. ಎಎಸ್‌ಪಿ ಶಂಕರ ಮಾರಿಹಾಳ, ಡಿವೈಎಸ್‌ಪಿ ಬಸವರಾಜ ಯಲಿಗಾರ ಮತ್ತಿತರರಿದ್ದಾರೆ.  
ಜಿಲ್ಲೆ

ಕಳ್ಳನ ಬಂಧನ ಮೂರು ವಾಹನ ವಶ

Vijyapura - Parsuram Bhasagi

ವಿಜಯಪುರ: ಹೆಚ್ಚುತ್ತಿರುವ ವಾಹನ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಚುರುಕಿನ ಕಾರ್ಯಾಚರಣೆ ನಡೆಸಿರುವ ಪೊಲೀಸರು ಓರ್ವ ಕಳ್ಳನನ್ನು ಬಂಧಿಸಿ ಆತನಿಂದ ಮೂರು ವಾಹನ ವಶಕ್ಕೆ ಪಡೆದಿದ್ದಾರೆ.

ಯಾಸೀನ್ ಅಲಿಯಾಸ್ ಮಹ್ಮದ್ ಯಾಸೀನ ಬಂಧಿತ ಆರೋಪಿ. ಬುಧವಾರ ಸಿಂದಗಿ ನಾಕಾ ಬಳಿ ಅನುಮಾನಾಸ್ಪದವಾಗಿ ನಂಬರ್ ಪ್ಲೇಟ್ ಇಲ್ಲದ ವಾಹನದಲ್ಲಿ ತಿರುಗಾಡುತ್ತಿದ್ದ ಯಾಸೀನ್‌ನನ್ನು ಬೆನ್ನಟ್ಟಿದ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಕಳ್ಳತನ ವಿವರ ಬಯಲಾಗಿದೆ.

ಈತನಿಂದ ಸ್ವಿಫ್ಟ್ ಡಿಸೈರ್ ಕಾರ್ ಹಾಗೂ ಮಹೀಂದ್ರ ಟಿಯುವಿ, ಡಿಯು ವಾಹನ ವಶಕ್ಕೆ ಪಡೆಯಲಾಗಿದ್ದು ಇನ್ನೂ ಅನೇಕ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಬಂಧಿತ ಆರೋಪಿ ಒಪ್ಪಿಕೊಂಡಿರುವುದಾಗಿ ಎಸ್‌ಪಿ ಋಷಿಕೇಶ ಸೋನಾವಣೆ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಎಎಸ್‌ಪಿ ಶಂಕರ ಮಾರಿಹಾಳ, ಡಿವೈಎಸ್‌ಪಿ ಬಸವರಾಜ ಯಲಿಗಾರ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.