ಜಿಲ್ಲೆ

6 ಗಂಟೆಯಲ್ಲೇ ಚೋರನ ಬಂಧನ

ಮಡಿಕೇರಿ:

ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಚೇರಂಬಾಣೆಯಲ್ಲಿ ಮಹಿಳೆಯೊಬ್ಬರಿಗೆ ಬೆದರಿಸಿ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿ ಚೇರಂಬಾಣೆ ನಿವಾಸಿ ಸುದರ್ಶನ್ (24) ಎಂಬಾತನನ್ನು ಬಂಧಿಸಲಾಗಿದೆ.
ಆರೋಪಿಯಿಂದ 60.530 ಗ್ರಾಂ ಚಿನ್ನ, 620 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ ಚಾಕು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ನಡೆದಂದೇ ಸಂಜೆ 5 ಗಂಟೆಗೆ ಸಣ್ಣಪುಲಿಕೋಟು ಬಸ್ ನಿಲ್ದಾಣದಲ್ಲಿ ಭಾಗಮಂಡಲ ಪಿಎಸ್‌ಐ ಶೋಭಾ ಲಮಾಣಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಗುರುವಾರ (ಆ.22) ಬೆಳಗ್ಗೆ ಸ್ಥಳೀಯ ನಿವಾಸಿ ಗೋಪಾಲಕೃಷ್ಣ ಕೆ.ಕೆ. ಎಂಬವರ ತಾಯಿ ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಮನೆ ನುಗ್ಗಿದ ಆರೋಪಿ ಸುದರ್ಶನ ಚಾಕು ತೋರಿಸಿ, ಬೆದರಿಸಿ ಹಲ್ಲೆ ಮಾಡಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಮನೆಯ ಬೀರುವಿನಲ್ಲಿದ್ದ ಚನಾಭರಣಗಳನ್ನು ದರೋಡೆ ಮಾಡಿರುವ ಕುರಿತು ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಘಟನೆ ನಡೆದ 6 ಗಂಟೆಯೊಳಗೆ ಪ್ರಕರಣ ಬೇಧಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯವೈಖರಿಯನ್ನು ಎಸ್‌ಪಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.