ಜಿಲ್ಲೆ

ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯಗಳ ಕಾರ್ಯ ಶ್ಲಾಘನೀಯ

ಸದೇಶ್ ಕಾರ್ಮಾಡ್

ಮೈಸೂರು: ಶಿಕ್ಷಣ, ಸಂಸ್ಕೃತಿ ಮತ್ತು ಸೇವಾ ಕಾರ್ಯದಲ್ಲಿ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯಗಳ ಕಾರ್ಯ ಶ್ಲಾಘನೀಯ ಎಂದು ಪ್ರಾಧ್ಯಾಪಕ ಯೋಗೇಶ ಹೇಳಿದರು.

ಸುತ್ತೂರಿನ ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳು, ಪಾಲಕರು ಹಾಗೂ ಉಪನ್ಯಾ ಸಕರ ಸಭೆಯಲ್ಲಿ ಮಾತನಾಡಿ, ಜೆಎಸ್‌ಎಸ್ ಸಂಸ್ಥೆಯು ಕೇವಲ ಶಿಕ್ಷಣ ನೀಡದೆ ಸಾಮಾಜಿಕ ಬದುಕಿಗೆ ಅಡಿಪಾಯ ಹಾಕಿಕೊಟ್ಟು, ಪ್ರತಿಯೊಬ್ಬರಲ್ಲೂ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ. ಶಿಕ್ಷಣ, ಸಂಸ್ಕೃತಿ ಮತ್ತು ಸೇವಾ ಕಾರ್ಯದಲ್ಲಿ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯಗಳ ಕಾರ್ಯ ಶ್ಲಾಘನೀಯ ಎಂದರು.

ಇಂತಹ ಸಭೆಗಳು ವಿದ್ಯಾರ್ಥಿಗಳು, ಪಾಲಕರು ಮತ್ತು ಶಿಕ್ಷಕರ ನಡುವಿನ ಬಾಂಧವ್ಯ ಹೆಚ್ಚಿಸುವುದರ ಜತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಬಗ್ಗೆ ಮಾಹಿತಿ ಪಡೆಯಲು ಸಹಾಯಕವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಡಾ.ಎಚ್.ಎಂ. ಮಹೇಶ್ ಮಾತನಾಡಿ, ಇಂತಹ ಸಭೆಗಳು ಶಿಕ್ಷಕರ ಮತ್ತು ಪಾಲಕರ ಜವಾಬ್ದಾರಿ ಹೆಚ್ಚುಸುವುದರ ಜತೆಗೆ ಪಾಲಕರ ಸಲಹೆಗಳು ಗುಣಾತ್ಮಕ ಶಿಕ್ಷಣಕ್ಕೆ ಮಾರ್ಗದರ್ಶನವಾಗುತ್ತದೆ. ವಿದ್ಯಾರ್ಥಿಗಳು ಪಾಲಕರ ಕಷ್ಟಗಳನ್ನು ಅರಿತು ಸಮಯ ವ್ಯರ್ಥಮಾಡದೆ ಉನ್ನತ ವ್ಯಾಸಂಗದ ಮೂಲಕ ಪಾಲಕರ ಆಶೋತ್ತರಗಳನ್ನು ಈಡೇರಿಸಬೇಕು ಎಂದು ಕಿವಿಮಾತು ಹೇಳಿದರು.