ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು. ರವಿಕುಮಾರ್.ಶಿವರಾಜಪ್ಪ, ನಾಗರಾಜು ಎಂ ಎಸ್, ಶಿವರುದ್ರಪ್ಪ, ಎಂ.ಪಿ.ಶ್ರೀಕಂಠಪ್ಪ, ಎಂ.ಕೆ.ಪ್ರಕಾಶ್, ರಾಜಪ್ಪ, ಎಂ ಮೋಹನಕುಮಾರ್, ಪರಶಿವಮೂರ್ತಿ ಇತರರಿದ್ದರು. 
ಜಿಲ್ಲೆ

ಮಕ್ಕಳ ಬಾಳಿಗೆ ಬೆಳಕಾದ ವಿಶ್ವದ ಶ್ರೇಷ್ಠ ಸಂತ

ಸರಗೂರು: ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಲಕ್ಷಾಂತರ ಮಕ್ಕಳಿಗೆ ಅನ್ನ, ಅಕ್ಷರ ಹಾಗೂ ಆಶ್ರಯ ನೀಡಿದವರು. ತ್ರಿವಿಧ ದಾಸೋಹದ ಮೂಲಕ ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ವಿಶ್ವದ ಶ್ರೇಷ್ಠ ಸಂತ ಎಂದು ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ರವಿಕುಮಾರ್ ಹೇಳಿದರು.

ತಾಲೂಕಿನ ಮುಳ್ಳೂರು ಗ್ರಾಮದ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಡಾ.ಶಿವಕುಮಾರ ಸ್ವಾಮೀಜಿ ಅವರ 118ನೇ ಜನ್ಮದಿನಾಚರಣೆ ಪ್ರಯುಕ್ತ ಶಿವಕುಮಾರ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡಿದರು.

ಶಿವಕುಮಾರ ಸ್ವಾಮೀಜಿ ಅವರು ಅನ್ನದಾಸೋಹ ಮತ್ತು ಬಡಮಕ್ಕಳಿಗೆ ಶಿಕ್ಷಣ ನೀಡುವ ಕಾಯಕದಿಂದ ಇಡೀ ರಾಷ್ಟ್ರದ ಗಮನ ಸೆಳೆದಿದ್ದರು. ಅವರ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ಸಮಾಜದಲ್ಲಿ ಉನ್ನತ ಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸ್ಮರಿಸಿದರು. ಅವರು ಬಡವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದರು. ನಿಸ್ವಾರ್ಥ ಸೇವೆಯಿಂದ ಜನರ ಮನಸ್ಸು ಗೆದ್ದಿದ್ದರು ಎಂದರು.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಹೇಗಿರಬೇಕು ಎಂಬುದನ್ನು ಇಡೀ ದೇಶಕ್ಕೆ ತೋರಿಸಿಕೊಟ್ಟವರು ಶಿವಕುಮಾರ ಸ್ವಾಮೀಜಿ. ಅವರು ರೈತರ ಸಮಸ್ಯೆಗಳ ಬಗ್ಗೆ ದನಿ ಎತ್ತುತ್ತಿದ್ದರು. ಪರಿಸರ, ಶಿಕ್ಷಣ ಹಾಗೂ ಸಾಮಾಜಿಕ ಸಮಸ್ಯೆಗಳ ಬಗ್ಗೆ ಸದಾ ಚಿಂತನೆ ಮಾಡುತ್ತಿದ್ದರು ಎಂದು ಹೇಳಿದರು. ಗ್ರಾಮದ ಮುಖಂಡರು, ಭಕ್ತರಿಗೆ ಸಿಹಿ ವಿತರಣೆ ಮತ್ತು ಅನ್ನದಾನದ ವ್ಯವಸ್ಥೆ ಮಾಡಿದ್ದರು. ಮುಖಂಡರಾದ ಶಿವರಾಜಪ್ಪ, ನಾಗರಾಜು ಎಂ ಎಸ್, ಶಿವರುದ್ರಪ್ಪ, ಎಂ.ಪಿ.ಶ್ರೀಕಂಠಪ್ಪ, ಎಂ.ಕೆ.ಪ್ರಕಾಶ್, ರಾಜಪ್ಪ, ಎಂ ಮೋಹನಕುಮಾರ್, ಪರಶಿವಮೂರ್ತಿ, ಕೆಂಡಗಣ್ಣಪ್ಪ, ಮಹದೇವಸ್ವಾಮಿ, ಪ್ರಶಾಂತ್ ಕುಮಾರ್, ಚಂದ್ರಪ್ಪ, ವೃಷಬೇಂದ್ರ, ಶಿವಮಲ್ಲು, ಮಹೇಶ್, ವಿಜಯಕುಮಾರ್, ಮಹದೇವಪ್ಪ, ರೆವಣ್ಣ, ಜಯಪ್ಪ, ಸಿದ್ದಪ್ಪ, ಶಿವಪ್ಪ, ರವಿಕುಮಾರ್, ರಾಜಾಚಾರಿ, ರಾಜಯ್ಯ ಇತರರಿದ್ದರು.