ಜಿಲ್ಲೆ

ಅಂತಾರಾಜ್ಯ ಕಳ್ಳರ ಬಂಧನ

Dharwada - Basavaraj Idli

ಹುಬ್ಬಳ್ಳಿ: ಮನೆ ಕಳ್ಳತನ ಮಾಡುತ್ತಿದ್ದ ಮೂವರು ಅಂತಾರಾಜ್ಯ ಕಳ್ಳರನ್ನು ಹಳೇಹುಬ್ಬಳ್ಳಿ ಪೊಲೀಸರು ಬಂಧಿಸಿ ಅವರಿಂದ ಸುಮಾರು ಎಂಟು ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಹಳೇಹುಬ್ಬಳ್ಳಿ ಠಾಣೆ, ಬೈಲಹೊಂಗಲ, ಹುಕ್ಕೇರಿ ಮುಂತಾದ ಠಾಣೆ ವ್ಯಾಪ್ತಿಯಲ್ಲಿ ಇವರು ಮನೆ ಕಳ್ಳತನ ಮಾಡಿದ್ದರು. ಕಳ್ಳತನ ನಂತರ ಇವರು ಬೇರೆ ರಾಜ್ಯಗಳಿಗೆ ತೆರಳಿದ್ದರು.

ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಹಳೇಹುಬ್ಬಳ್ಳಿ ಇನ್ಸಪೆಕ್ಟರ್ ಎಸ್.ಎಚ್. ಯಳ್ಳೂರ ಹಾಗೂ ತಂಡದವರು ಮೂವರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

104 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಒಡವೆ, ಕಳ್ಳತನಕ್ಕೆ ಬಳಸಿದ ಕಾರು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿಗಳ ಪತ್ತೆಗೆ ಶ್ರಮಿಸಿದ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.