ಬಳ್ಳಾರಿ ಎಸ್ಪಿ ಸೈದುಲು ಅದಾವತ್  
ಜಿಲ್ಲೆ

ಯುವತಿಯರ ಸಾವಿನ ತನಿಖೆಗೆ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚನೆ: ಬಳ್ಳಾರಿ ಎಸ್ಪಿ ಸೈದುಲು ಅದಾವತ್ ಮಾಹಿತಿ

ಸಿರಗುಪ್ಪ: ತೆಕ್ಕಲಕೋಟೆ ಸಿಂಧೋಳ್ಳು ಕಾಲನಿಯ ಇಬ್ಬರು ಯುವತಿಯರ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಬಳ್ಳಾರಿ ಎಸ್ಪಿ ಸೈದುಲು ಅದಾವತ್ ತಿಳಿಸಿದರು.

ವತಿಯರು ಮೃತಪಟ್ಟ ತುಂಗಭದ್ರಾ ನದಿ ತೀರದ ಘಟನಾ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು. ಮೃತಪಟ್ಟ ಜೇಜಮ್ಮ ಮತ್ತು ಸಿದ್ದಮ್ಮ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಅವರ ಪಾಲಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ದೂರು ನೀಡಿದ್ದಾರೆ. ಸಾವಿನ ಬಗ್ಗೆ ವೈದ್ಯರು ನೀಡುವ ವರದಿ ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ಮಾಹಿತಿ ಆಧಾರದ ಮೇಲೆ ತನಿಖೆ ನಡೆಸಲಾಗುತ್ತದೆ. ಅಲ್ಲದೆ ಬಳ್ಳಾರಿ ಗ್ರಾಮೀಣ ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ ಎಂದು ತಿಳಿಸಿದರು.