ಉಡುಪಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ತೆಂಕನಿಡಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಡಿ.ನಾಯ್ಕ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಶೋಭಾ ಅವರು, ಪಕ್ಷದ ಚೌಕಟ್ಟು ಮೀರಿ ಗ್ರಾಪಂ ಸದಸ್ಯರು ಮತ್ತು ನಾಯಕರ ಮೇಲೆ ಸುಳ್ಳು ಕೇಸನ್ನು ದಾಖಲಿಸಿದ್ದು, ಪಕ್ಷಕ್ಕೆ ತಾವು ಮುಜುಗರ ಮಾಡುವಂತೆ ಸನ್ನಿವೇಶ ನಿಮಾರ್ಣ ಮಾಡಿದ್ದಾರೆ. ಪಕ್ಷದ ಸದಸ್ಯರ ಗಮನಕ್ಕೆ ತಾರದೆ ಪಂಚಾಯಿತಿಗೆ ಸಂಬಂಧಪಟ್ಟ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದು, ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಅಶಿಸ್ತಿನ ವರ್ತನೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಉಡುಪಿ ಬಿಜೆಪಿ ನಗರ ಅಧ್ಯಕ್ಷ ದಿನೇಶ ಅಮೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.