ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು. ಈ ಕುರಿತಾಗಿ ಎಚ್ಡಿಡಿ ಅವರೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಟ್ವೀಟ್ನಲ್ಲಿ ಏನಿದೆ?; ನನ್ನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ವರದಿಗಳು ಸುದ್ದಿ ವಾಹಿನಿಗಳಲ್ಲಿ ಕಾಣಿಸಿಕೊಳ್ಳುತ್ತಿವೆ ಎಂದು ನನಗೆ ತಿಳಿದಿದೆ. ನಾನು ವಾಡಿಕೆಯಂತೆ ಇಂದೂ ಕೂಡಾ ಆರೋಗ್ಯ ತಪಾಸಣೆಗಾಗಿ ಮಾತ್ರ ಆಸ್ಪತ್ರೆಯಲ್ಲಿದ್ದೇನೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ನಾನು ಶೀಘ್ರದಲ್ಲೇ ಮನೆಗೆ ಹಿಂತಿರುಗುತ್ತೇನೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಉಸಿರಾಟ ಸಮಸ್ಯೆ ಕಾಣಿಕೊಂಡ ಹಿನ್ನೆಲೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಗೌಡರ ಆರೋಗ್ಯ ನಿಗಾವಹಿಸಿದ್ದಾರೆ.ದೇವೇಗೌಡರಿಗೆ ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದೆ. ಮಣಿಪಾಲ್ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ದಾಖಲಿಸಿಕೊಂಡು ನಿಗಾವಹಿಸಿದ್ದಾರೆ. ಸದ್ಯ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎನ್ನಲಾಗಿತ್ತು. ಈ ಕುರಿತಾಗಿ ಎಚ್ ಡಿ ದೇವೇಗೌಡ ಅವರೆ ಈಗ ಸ್ಪಷ್ಟನೆ ನೀಡದ್ದಾರೆ.