ಹುಬ್ಬಳ್ಳಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಲೇ ಇವೆ. ಹಂತ ಹಂತವಾಗಿ ಅನುದಾನ ನೀಡುವ ಮೂಲಕ ರಾಜ್ಯದಾದ್ಯಂತ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲಾಗುತ್ತಿದೆ. ರಾಜ್ಯದ ಅಭಿವೃದ್ಧಿಗೆ ಸರ್ಕಾರದಲ್ಲಿ ಹಣದ ಕೊರತೆ ಇಲ್ಲ ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಹೇಳಿದರು.
9 ಕೋಟಿ ರೂ. ಅನುದಾನದಲ್ಲಿ ಹುಬ್ಬಳ್ಳಿ ತಾಲೂಕಿನ ಮಂಗಸೂಳಿ-ಲಕ್ಷೆ್ಮೕಶ್ವರ ರಾಜ್ಯ ಹೆದ್ದಾರಿಯ ಆಯ್ದ ಬಾಗಗಳಲ್ಲಿ ಮತ್ತು ಪಿ.ಬಿ. ರಸ್ತೆ ದಿವಾನ್ಚಾಚಾ ದರ್ಗಾದಿಂದ ಹೊಸಗಬ್ಬೂರಿನ ಪ್ರವೇಶದ್ವಾರದವರೆಗೆ ಲೋಕೋಪಯೋಗಿ ಇಲಾಖೆಯಿಂದ ಅಭಿವೃದ್ಧಿ ಪಡಿಸಲಾಗುತ್ತಿರುವ ರಸ್ತೆ ಕಾಮಗಾರಿಗೆ ಪೂರ್ವ ಕ್ಷೇತ್ರದ ವಾರ್ಡ್ ಸಂಖ್ಯೆ 82ರ ಬಿಡನಾಳ ಕ್ರಾಸ್ ಬಳಿ ಮಂಗಳವಾರ ಭೂಮಿಪೂಜೆ ನೆರವೇರಿಸಿ, ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ವರ್ಷ 56ಸಾವಿರ ಕೋಟಿ ರೂ.ಗಳನ್ನು ನೇರವಾಗಿ ಬಡವರಿಗೆ ತಲುಪಿಸುತ್ತಿರುವ ದೇಶದ ಏಕೈಕ ರಾಜ್ಯ ಕರ್ನಾಟಕದ ಕಾಂಗ್ರೆಸ್ ಸರ್ಕಾರ. ನಮ್ಮದು ಜನಪರ, ಬಡವರಪರ, ಅಹಿಂದ ಪರ ಸರ್ಕಾರವಾಗಿದೆ. ಕಳೆದ ಬಿಜೆಪಿ ಸರ್ಕಾರದ 4ವರ್ಷದ ಆಡಳಿತ ಅವಧಿಯಲ್ಲಿ ಕ್ಷೇತ್ರಕ್ಕೆ ನೀಡಿದ ಒಟ್ಟು ಅನುದಾನಕ್ಕೆ ಹೆಚ್ಚು ಅನುದಾವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಒಂದೇ ವರ್ಷದಲ್ಲಿ ನೀಡಿದೆ ಎಂದರು.
ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ದೊರೆಯುತ್ತಿದ್ದು, ರಸ್ತೆಗಳ ಅಭಿವೃದ್ಧಿ ಆದ್ಯತೆ ನೀಡಲಾಗುತ್ತಿದೆ. ನೀರು, ಚರಂಡಿ ಮೂಲಸೌಲಭ್ಯ ಸೇರಿ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಆರೋಗ್ಯ, ಶೀಕ್ಷಣ ಕ್ಷೇತ್ರದಲ್ಲೂ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಆಸ್ಪತ್ರೆ ನಿರ್ಮಾಣ ಕಾಮಗಾರಿ, ಶಾಲಾ ಕೊಠಡಿಗಳ ನಿರ್ವಣ, ಸ್ಮಾರ್ಟ್ ಬೋರ್ಡ್ ಸೇರಿ ಕೊಟ್ಯಾಂತ ರೂ. ಅನುದಾನ ನೀಡಲಾಗುತ್ತಿದೆ ಎಂದು ಹೇಳಿದರು.
ಇಲ್ಲಿನ ಹೊಸಮೇದಾರ ಓಣಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ವಿುಸಲಾದ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೆಂಟರ್ ಆರಂಭಿಸಲಾಗುತ್ತಿದ್ದು, ಈಗಾಗಲೇ ಯೋಜನೆ ಅನುಷ್ಠಾನ ಹಂತದಲ್ಲಿದೆ. ಶೀಘ್ರದಲ್ಲೇ ಈ ಭಾಗದ ಜನರ ಸೇವೆ ಲಭ್ಯವಾಗಲಿದೆ ಎಂದು ಹೇಳಿದರು.
ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ತಾಫ್ ಹಳ್ಳೂರು, ಪಾಲಿಕೆ ಮಾಜಿ ಸದಸ್ಯರಾದ ಮೋಹನ ಅಸುಂಡಿ, ಶಿವನಗೌಡ ಹೊಸಮನಿ, ಯಮನೂರ ಜಾಧವ, ವಿಜನಗೌಡ ಪಾಟೀಲ, ಗಣೇಶ ಟಗರಗುಂಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಹಮೂದ್ ಕೋಳೂರು, ಪ್ರಸನ್ನ ಮಿರಜಕರ, ಮುಖಂಡರಾದ ವೀರಭದ್ರಪ್ಪ ಮೇಟಿ, ಫಕೀರಪ್ಪ ಕಲ್ಲನ್ನವರ, ಚನ್ನಬಸಪ್ಪ ಡೊನಗನವರ, ಮಂಜುನಾಥ ಉಪ್ಪಾರ, ಹಜರತ್ಅಲಿ ಮುನ್ಸಿ, ಅಜರುದ್ದಿನ ಮನಿಯಾರ ಹಾಗೂ ಇತರರು ಇದ್ದರು.