ಜಿಲ್ಲೆ

ತಾಯಿಗೆ ಸಮನಾದ ದೇವರಿಲ್ಲ

ಇಂದಿರಾ ಎನ್ ಕೆ

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಈ ಭೂಮಿ ಮೇಲಿನ ಅದ್ಭುತ ದೇವತೆ ತಾಯಿ. ತಾಯಿಗೆ ಸಮನಾದ ದೇವರಿಲ್ಲ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಥಮ ದರ್ಜೆ ಕಾಲೇಜು ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ ಮೊಳಹಳ್ಳಿ ಹೇಳಿದರು.

ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಾತೃ ವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಮೃತ ಭಾರತಿ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಸತೀಶ್ ಪೈ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್, ವಿದ್ಯಾಲಯ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ, ಟ್ರಸ್ಟಿಗಳಾದ ಬಾಲಕೃಷ್ಣ ಮಲ್ಯ, ಗಣೇಶ್ ಕಿಣಿ, ಹಾಸ್ಟೆಲ್ ಕಮಿಟಿ ಅಧ್ಯಕ್ಷೆ ಡಾ.ಭಾರ್ಗವಿ ಐತಾಳ್, ಸಂಸ್ಥೆ ಮುಖ್ಯಸ್ಥರಾದ ಅಮರೇಶ್ ಹೆಗ್ಡೆ, ಅರುಣ್, ಅನಿತಾ, ಅಪರ್ಣಾ, ಶಕುಂತಳಾ, ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಸಂಸ್ಥೆಯ ಸಂಸ್ಕೃತ ಉಪನ್ಯಾಸಕ ಹರಿಶ್ಚಂದ್ರ ಪೂಜಾ ಕೈಂಕರ್ಯ ನೆರವೇರಿಸಿದರು. ವಿದ್ಯಾರ್ಥಿಗಳು ತಮ್ಮ ತಾಯಂದಿರ ಪಾದ ತೊಳೆದು, ಅರಿಶಿಣ ಕುಂಕುಮ ಹಚ್ಚಿ, ಆರತಿ ಬೆಳಗಿ, ಸಿಹಿ ತಿನ್ನಿಸಿದರು. ಉಪನ್ಯಾಸಕರಾದ ವೀಣೇಶ್ ಅಮೀನ್, ಸುಹಾಸ್ ನಿರೂಪಿಸಿದರು.